School Leader; ಪೆನ್ಸಿಲ್ ಬಾಕ್ಸ್ ನಿರ್ದೇಶಕ ರಝಾಕ್ ಪತ್ತೂರು ಅವರ `ಸ್ಕೂಲ್ ಲೀಡರ್’ ತೆರೆಗೆ ಬರಲು ಸಿದ್ಧ

ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾದ ಕೆ. ಸತ್ಯೇಂದ್ರ ಪೈ ನಿರ್ಮಾಣದ ಸ್ಕೂಲ್ ಲೀಡರ್ (School Leader) ಕನ್ನಡ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು ಏಪ್ರಿಲ್ ತಿಂಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.
ಈ ಹಿಂದೆ ಬಿಡುಗಡೆಗೊಂಡು ಯಶಸ್ವಿಯಾದ ಪೆನ್ಸಿಲ್ ಬಾಕ್ಸ್ (Pencil Box) ಎಂಬ ಚಿತ್ರದ ನಿರ್ದೇಶಕರಾದ ರಝಾಕ್ ಪತ್ತೂರು (Razak Puttur) ಇವರು ಸ್ಕೂಲ್ ಲೀಡರ್ ಚಿತ್ರವನ್ನು ಕತೆ, ಚಿತ್ರ ಕತೆ, ಸಂಭಾಷಣೆ ಜೊತೆಗೆ ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ. ಸ್ಕೂಲ್ ಲೀಡರ್ ಸಿನಿಮಾ ಹೈಸ್ಕೂಲ್ ಮಕ್ಕಳ ಮನೋ ವಿಕಾಸ, ಶೈಕ್ಷಣಿಕ ಬದುಕು ಮತ್ತು ಮಕ್ಕಳಲ್ಲಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳುವ ಕಥಾಶಸ್ತುವನ್ನು ಹೊಂದಿದೆ. ಇದು ಶಾಲಾ ಚುನಾವಣೆಯನ್ನು ಆಧರಿಸಿದ ಕತೆಯಾದುದರಿಂದ ಇಡೀ ಸಿನಿಮಾವನ್ನು ಕಟಪಾಡಿಯ ಒಂದೇ ಶಾಲೆಯಲ್ಲಿ ಚಿತ್ರೀಕರಿಸಲಾಗಿದೆ. ಸುಮಾರು 25 ಶಾಲೆಯ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷ.
ತುಳು ಚಿತ್ರ ರಂಗದ ದಿಗ್ಗಜರಾದ ಅರವಿಂದ್ ಬೋಳಾರ್, ಬೋಜರಾಜ್ ವಾಮಂಜೂರು, ದೀಪಕ್ ರ ಪಾಣಾಜೆ ಮತ್ತು ಕನ್ನಡದ ಹಿರಿಯ ನಟ ರಮೇಶ್ ಭಟ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರದ ಓಟು ಓಟು ಎಂಬ ಹಾಡು ಈಗಾಗಲೇ ಬಿಡುಗಡೆ ಆಗಿದೆ. ಚಿತ್ರದ ಛಾಯಾಗ್ರಾಹಕರಾಗಿ ಮೋಹನ್ ಪಡ್ರೆ, ಜಯಕಾರ್ತಿ ಯವರ ಸಂಗೀತ, ಸಚಿನ್ ರಾಮ್ ಸಂಕಲನ, ಆಶಿಶ್ ಅಂಚನ್ ನೃತ್ಯ ನಿರ್ದೇಶನ ಮತ್ತು ಅಕ್ಷತ್ ವಿಟ್ಲ ಸಹ ನಿರ್ದೇಶಕರಾಗಿದ್ದು ಸುದರ್ಶನ್ ಶಂಕರ್ ಹಾಗೂ ಎಂ ಎಂ ವಿಮಲ್ ಸಹ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.