Toxic Release Date; ಯಶ್‍ ನಟನೆಯ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಪ್ರಕಟ…

ಯಶ್‍ (Yash) ಅಭಿನಯದ ‘ಟಾಕ್ಸಿಕ್‍’ (Toxic) ಚಿತ್ರದ ಚಿತ್ರೀಕರಣ ಕಳೆದ ಕೆಲವು ತಿಂಗಳುಗಳಿಂದ ಭರದಿಂದ ಸಾಗಿದೆ. ಚಿತ್ರವು ಈ ವರ್ಷದ ಏಪ್ರಿಲ್‍ 10ರಂದು ಬಿಡುಗಡೆ ಆಗುತ್ತದೆ (Toxic Release Date) ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಚಿತ್ರದ ಚಿತ್ರೀಕರಣವೇ ಮುಗಿಯದ ಕಾರಣ, ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿತ್ತು. ಈಗ ಚಿತ್ರದ ಹೊಸ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

Toxic
Toxic

‘ಟಾಕ್ಸಿಕ್‍’ ಚಿತ್ರವು ಕಳೆದ ವರ್ಷದ ಆರಂಭದಲ್ಲಿ ಘೋಷಣೆಯಾಗಿತ್ತು. ಘೋಷಣೆಯ ದಿನವೇ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿತ್ತು. ಅದರ ಪ್ರಕಾರ, ಚಿತ್ರವು 2025ರ ಏಪ್ರಿಲ್‍ 10ರಂದು ಜಗತ್ತಿನಾದ್ಯಂತ ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರೀಕರಣ ಶುರುವಾಗಿದ್ದು ಆಗಸ್ಟ್ನಲ್ಲಿ ಆದ್ದರಿಂದ, ಅಂದುಕೊಂಡ ಸಮಯದಲ್ಲಿ ಚಿತ್ರವು ಬಿಡುಗಡೆಯಾಗುವುದು ಸಂಶಯ ಎಂಬ ಮಾತು ಕೇಳಿಬಂದಿತ್ತು. ಆದರೆ, ಚಿತ್ರತಂಡ ಈ ಕುರಿತು ಯಾವುದೇ ಸ್ಪಷ್ಟನೆ ಬಂದಿರಲಿಲ್ಲ.

ಈಗ ಚಿತ್ರದ ಹೊಸ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಅದರ ಪ್ರಕಾರ 2026ರ ಮಾರ್ಚ್ 19ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

‘ಟಾಕ್ಸಿಕ್‍’ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ (KVN production) ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತೂ ಮೋಹನ್‍ ದಾಸ್‍ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಯಶ್‍, ಕಿಯಾರಾ ಅಡ್ವಾಣಿ, ನಯನತಾರಾ, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್‍, ಅನಿಲ್‍ ಕಪೂರ್, ಹಾಲಿವುಡ್‍ ನಟ ಕೈಲ್‍ ಪಾಲ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರವು ಪ್ಯಾನ್‍ ಇಂಡಿಯಾ ಚಿತ್ರ ಎಂದು ಹೇಳಲಾಗಿತ್ತು. ಜಾಗತಿಕ ಮಟ್ಟದಲ್ಲಿ ಈ ಚಿತ್ರವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ನಿರ್ಮಾಪಕ ವೆಂಕಟ್ ಹಾಗೂ ಚಿತ್ರದ ನಾಯಕ ಯಶ್ ಮುಂದಾಗಿದ್ದು, ಚಿತ್ರವನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಚಿತ್ರೀಕರಿಸಲಾಗುತ್ತಿದೆ. ಬಳಿಕ ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಅಂತಾರಾಷ್ಟ್ರೀಯ ಭಾಷೆಗಳಲ್ಲಿ ಡಬ್ ಮಾಡಲಾಗುತ್ತದೆ.

Leave a Reply

Your email address will not be published. Required fields are marked *