Billa Ranga Baasha; ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕೆ ನಾಯಕಿ ಆಗ್ತಾರಾ ಪೂಜಾ ಹೆಗ್ಡೆ?

ಬಾಲಿವುಡ್ ಹಾಗೂ ತೆಲುಗು ಚಿತ್ರಗಳಲ್ಲಿ ನಟಿಸಿರುವ ಪೂಜಾ ಹೆಗ್ಡೆಗೆ (Pooja Hegde) ಕರ್ನಾಟಕಕ್ಕೆ ಬಂದಾಗಲೆಲ್ಲಾ ಎದುರಾಗುವ ಒಂದು ಪ್ರಶ್ನೆಯೆಂದರೆ, ಕನ್ನಡ ಮತ್ತು ತುಳು ಚಿತ್ರಗಳಲ್ಲಿ ಯಾವಾಗ ನಟಿಸುತ್ತೀರಾ ಎಂದು. ಏಕೆಂದರೆ, ಪೂಜಾ ಮೂಲತಃ ಕರ್ನಾಟಕದವರಾದರೂ ಇದುವರೆಗೂ ಯಾವೊಂದು ಕನ್ನಡ ಅಥವಾ ತುಳು ಚಿತ್ರದಲ್ಲೂ ನಟಿಸಿಲ್ಲ. ಒಳ್ಳೆಯ ಅವಕಾಶ ಬಂದರೆ ಖಂಡಿತಾ ನಟಿಸುತ್ತೇನೆ ಎಂದು ಹೇಳುತ್ತಲೇ ಬಂದಿದ್ದ ಪೂಜಾ, ಈಗ ಕನ್ನಡದಲ್ಲಿ ನಟಿಸುವುದಕ್ಕೆ ಸಜ್ಜಾಗಿರುವ ಸುದ್ದಿಯೊಂದು ಬಂದಿದೆ.
ಸುದೀಪ್ ಅಭಿನಯದ ‘ಬಿಲ್ಲ ರಂಗ ಭಾಷಾ’ (Billa Ranga Baasha) ಚಿತ್ರವು ಏಪ್ರಿಲ್ 16ರಂದು ಮುಹೂರ್ತವಾಗಿತ್ತು. ಚಿತ್ರದ ಚಿತ್ರೀಕರಣ ಸಹ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿಯಾಗಿದ್ದಾರೆ ಎಂಬ ಸುದ್ದಿಯೊಂದು ಕೇಳಿ ಬರುತ್ತಿದೆ. ಆದರೆ, ಚಿತ್ರತಂಡದವರು ಈ ವಿಷಯವನ್ನು ಇನ್ನೂ ಖಚಿತಪಡಿಸಿಲ್ಲ.


ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲ ‘ಹನುಮಾನ್’ ಚಿತ್ರವನ್ನು ನಿರ್ಮಿಸಿದ್ದ ನಿರಂಜನ್ ರೆಡ್ಡಿ ಮತ್ತು ಚೈತನ್ಯ ರೆಡ್ಡಿ, ಪ್ರೈಮ್ ಶೋ ಎಂಟರ್ ಟೈನ್ಮೆಂಟ್ ಬ್ಯಾನರ್ ಅಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರ ಹೆಸರುಗಳು ಇನ್ನೂ ಬಹಿರಂಗಗೊಂಡಿಲ್ಲ. ಹೀಗಿರುವಾಗಲೇ, ಚಿತ್ರದ ನಾಯಕಿಯಾಗಿ ಪೂಜಾ ನಟಿಸುತ್ತಾರೆ ಎಂಬ ಸುದ್ದಿ ಸದ್ದು ಮಾಡುತ್ತಿದೆ.
ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ‘ಬಿಲ್ಲ ರಂಗ ಭಾಷಾ’ ಚಿತ್ರವು ‘ವಿಕ್ರಾಂತ್ ರೋಣ’ಗೂ ಮೊದಲೇ ಪ್ರಾರಂಭವಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ತಡವಾಯ್ತು. ಈ ಚಿತ್ರವು ತಮ್ಮ ಜೀವನದಲ್ಲೇ ದೊಡ್ಡ ಚಿತ್ರವಾಗಲಿದೆ ಎಂದು ಸುದೀಪ್ ಹೇಳಿಕೊಂಡಿದ್ದಾರೆ. ಈ ಚಿತ್ರದ ಘೋಷಣೆ ಕಳೆದ ವರ್ಷ ಸುದೀಪ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅಧಿಕೃತವಾಗಿ ಆಗಿತ್ತು. ಈಗ ಕೊನೆಗೂ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ.
ಚಿತ್ರದ ಮುಹೂರ್ತದ ನಂತರ ಮಾತನಾಡಿರುವ ನಿರ್ದೇಶಕ ಅನೂಪ್ ಭಂಡಾರಿ, ʼ20 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಸುತ್ತೇವೆ. ಚಿತ್ರದ ಪ್ರಮುಖ ಸಾಹಸಮಯ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. ಅದಕ್ಕಾಗಿ ಸೆಟ್ ಕೆಲಸ ನಡೆಯುತ್ತಿತ್ತು. ಅದು ಈಗ ಪೂರ್ಣಗೊಂಡಿದ್ದು ಚಿತ್ರೀಕರಣಕ್ಕೆ ಸಿದ್ಧವಾಗಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿದ ಬಳಿಕ ಸಣ್ಣ ವಿರಾಮದ ನಂತರ ಮುಂದಿನ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತೇವೆʼ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:-
ಹೆಚ್ಚಿನ ಓದಿಗೆ:-
[…] […]
[…] […]
[…] Yuddakanda box office collection; ಗಳಿಕೆ ಗೊತ್ತಿಲ್ಲ, ಒಳ್ಳೆಯ ಪ್ರಯತ್ನ ಗೆದ್ದಿದೆ ಎಂದ ಅಜೇಯ್ ರಾವ್ […]
[…] Yuva Rajkumar Ekka; ‘ಎಕ್ಕ’ದಲ್ಲಿ ಪುನೀತ್ ಅವರನ್ನು ನೆನಪಿಸಿದ ಯುವ ರಾಜಕುಮಾರ್ […]
[…] […]