ಪ್ರತಿಯೊಬ್ಬರಲ್ಲೂ ಇರುವ ರಾಕ್ಷಸನ ಕಥೆ ‘ಗ್ರೀನ್’; ಟೀಸರ್ ಬಿಡುಗಡೆ

ಕಾನ್ಸ್ ವರ್ಲ್ಡ್ ಫಿಲಂ ಫೆಸ್ಟಿವಲ್‍ನಲ್ಲಿ ಅತ್ಯುತ್ತಮ ಭಾರತೀಯ ಚಿತ್ರ ಮತ್ತು ಭವಿಷ್ಯದ ನಿರ್ದೇಶಕ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುವುದರ ಜೊತೆಗೆ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿರುವ ‘ಗ್ರೀನ್’ (Green kannada Movie) ಚಿತ್ರವು ಇದೀಗ ರಾಜ್ಯದಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ.
ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಗ್ರೀನ್’ ಚಿತ್ರದಲ್ಲಿ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಇದು ಸೈಕಾಲಜಿಕಲ್ ಮೈಂಡ್ ಬೆಂಡಿಂಗ್ ಥ್ರಿಲ್ಲರ್ ಚಿತ್ರ ಎನ್ನುವ ನಿರ್ದೇಶಕ ರಾಜ್ ವಿಜಯ್, ‘ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೋರಾಟದ ಕಥೆಯೇ ‘ಗ್ರೀನ್’. ಇದೊಂದು ಕಾಡಿನಲ್ಲಿ ನಡೆಯುವ ಕಥೆಯಾಗಿದ್ದು, ಊಟಿ ಸೇರಿದಂತೆ ಹಲವು ಕಡೆ ಚಿತ್ರೀಕರಣ ಮಾಡಲಾಗಿದೆ. ಕೊರೆವ ಚಳಿಯಲ್ಲಿ ಬೆಳಗ್ಗಿನ ಜಾವದವರೆಗೂ ಅಲ್ಲಿ ಚಿತ್ರೀಕರಣ ಮಾಡಿದ್ದು ವಿಶೇಷ ಅನುಭವ. ಇದೊಂದು ಯೋಚನೆಗೆ ಹಚ್ಚುವ ಸಿನಿಮಾ. ಚಿತ್ರದಲ್ಲಿ ಓಪನ್ ಕ್ಲೈಮ್ಯಾಕ್ಸ್ ಇದ್ದು, ಪ್ರತಿಯೊಬ್ಬರೂ ಒಂದೊಂದು ರೀತಿಯಲ್ಲಿ ಚಿತ್ರವನ್ನು ಅರ್ಥೈಸಬಹುದು. ಇದು ಕನ್ನಡದ ಹೆಮ್ಮೆಯ ಚಿತ್ರವಾಗಲಿದೆ ಎಂಬ ನಂಬಿಕೆ ಇದೆ’ ಎಂದರು.
ವಿದೇಶಿಗರು ಮೆಚ್ಚಿಕೊಂಡಿರುವ ನಮ್ಮ ಚಿತ್ರವನ್ನು ಸ್ವದೇಶಿಗರು, ಅದರಲ್ಲೂ ಕನ್ನಡಿಗರು ಮೆಚ್ಚಿಕೊಳ್ಳುವ ಭರವಸೆ ಇದೆ ಎನ್ನುವ ರಾಜ್ ವಿಜಯ್. ‘ಹಾಲಿವುಡ್ ಶೈಲಿಯಲ್ಲಿ ಈ ಚಿತ್ರ ಮೂಡಿಬಂದಿದೆ. ವಿದೇಶಿ ಜ್ಯೂರಿಯವರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಭಾಷೆಯನ್ನು ಹೊರತುಪಡಿಸಿದರೆ, ಚಿತ್ರವು ಹಾಲಿವುಡ್ ಚಿತ್ರಗಳಿಗೆ ಹೋಲಿಸಬಹುದು. ಈ ಚಿತ್ರದ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಆ ಟ್ರೇಲರ್‌ನಲ್ಲಿ ಚಿತ್ರದ ಸಂಪೂರ್ಣ ಕಥೆ ಗೊತ್ತಾಗಲಿದೆ’ ಎಂದರು.
ಗೋಪಾಲಕೃಷ್ಣ ದೇಶಪಾಂಡೆ ಅವರಿಗೆ ನಿರ್ದೇಶಕರು ಸುಮಾರು ಎರಡೂವರೆ ಗಂಟೆ ಕಾಲ ಕಥೆ ಹೇಳಿದರಂತೆ. ಕನ್ನಡದಲ್ಲಿ ತೀರ ಅಪರೂಪದ ಕಥೆ ಇದು. ನಾನು ಇದುವರೆಗೂ ಮಾಡಿರದ ಒಂದು ಪಾತ್ರವನ್ನು ನಿರ್ವಹಿಸಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಮಾಯಣ್ಣ. ಚಿತ್ರೀಕರಣದಲ್ಲಿ ಭಾಗವಹಿಸಿ ಎರಡು ಶಾಟ್ ಮುಗಿದ ಮೇಲೆ ನಿರ್ದೇಶಕರಿಗೆ ಸಂಪೂರ್ಣವಾಗಿ ಒಪ್ಪಿಸಿಕೊಂಡು ಬಿಟ್ಟೆ. ನೀವು ಹೇಗೆ ಹೇಳುತ್ತೀರೋ ಹಾಗೆ ಮಾಡುತ್ತೀನಿ ಎಂದೆ. ಅವರು ಹೇಳಿದ್ದಷ್ಟನ್ನು ಮಾಡಿದ್ದೇನೆ’ ಎಂದರು.
‘ಗ್ರೀನ್’ ಚಿತ್ರದಲ್ಲಿ ಆರ್.ಜೆ. ವಿಕ್ಕಿ, ಶಿವ ಮಂಜು, ವಿಶ್ವನಾಥ್, ಡಿಂಪಿ ಫಾದ್ಯ ಮುಂತಾದವರು ನಟಿಸಿದ್ದಾರೆ. ಮಧುಸೂದನ್ ಛಾಯಾಗ್ರಹಣ ಮತ್ತು ಶಕ್ತಿ ಸ್ಯಾಕ್ ಸಂಗೀತ ಈ ಚಿತ್ರಕ್ಕಿದೆ.

ಇದನ್ನೂ ಓದಿ:-
ಹೆಚ್ಚಿನ ಓದಿಗೆ:-
[…] […]
[…] ಪ್ರತಿಯೊಬ್ಬರಲ್ಲೂ ಇರುವ ರಾಕ್ಷಸನ ಕಥೆ ‘ಗ್… […]
[…] ಪ್ರತಿಯೊಬ್ಬರಲ್ಲೂ ಇರುವ ರಾಕ್ಷಸನ ಕಥೆ ‘ಗ್ರೀನ್’; ಟೀಸರ್ ಬಿಡುಗಡೆ […]
[…] […]
[…] […]
One thought on “ಪ್ರತಿಯೊಬ್ಬರಲ್ಲೂ ಇರುವ ರಾಕ್ಷಸನ ಕಥೆ ‘ಗ್ರೀನ್’; ಟೀಸರ್ ಬಿಡುಗಡೆ”