Rakesh Poojari; ಕಾಮಿಡಿ ಕಿಲಾಡಿ ಖ್ಯಾತಿಯ ಹಾಸ್ಯ ನಟ ರಾಕೇಶ್ ಪೂಜಾರಿ ನಿಧನ

comedy kiladigalu Rakesh Poojari death

ಕಾಮಿಡಿ ಕಿಲಾಡಿಗಳು ಸಿಸನ್‌ 3ರ ವಿನ್ನರ್‌ ನಟ ರಾಕೇಶ್ ಪೂಜಾರಿ (34) (Rakesh Poojari) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 34 ವರ್ಷ ವಯಸ್ಸಾಗಿತ್ತು. ತನ್ನದೇ ಹಾಸ್ಯ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದರು. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಂತರ ಹಲವು ಚಿತ್ರಗಳಲ್ಲೂ ನಟಿಸಿದ್ದರು ರಾಕೇಶ್‌.

ಕಳೆದ ರಾತ್ರಿ ಉಡುಪಿಯಲ್ಲಿ ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿಗೆ ಸುಸ್ತು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ.

ಇನ್ನು ರಾಕೇಶ್ ಪೂಜಾರಿ ನಿಧನಕ್ಕೆ ಕನ್ನಡ ಚಿತ್ರರಂಗದ ನಟ, ನಟಿಯರು ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ‌.

ಇದನ್ನೂ ಓದಿ:-


ಹೆಚ್ಚಿನ ಓದಿಗೆ:-

One thought on “Rakesh Poojari; ಕಾಮಿಡಿ ಕಿಲಾಡಿ ಖ್ಯಾತಿಯ ಹಾಸ್ಯ ನಟ ರಾಕೇಶ್ ಪೂಜಾರಿ ನಿಧನ

Leave a Reply

Your email address will not be published. Required fields are marked *