ಅ. 2ಕ್ಕೆ ‘ಕಾಂತಾರ – ಚಾಪ್ಟರ್ 1’ ಬಿಡುಗಡೆ ಆಗೋದು ನಿಜ ಎಂದ Hombale Films

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್‍ 1’ (Kantara Chapter 1) ಚಿತ್ರದ ಚಿತ್ರೀಕರಣ ಇನ್ನೂ ಮುಗಿದಿಲ್ಲವಾದ್ದರಿಂದ, ಚಿತ್ರವು ಅಂದುಕೊಂಡುಂತೆಯೇ ಅಕ್ಟೋಬರ್‍ 02ರಂದು ಬಿಡುಗಡೆಯಾಗುವುದು ಸಂಶಯ ಎಂಬ ಮಾತು ಇತ್ತೀಚೆಗೆ ಕೇಳಿಬಂದಿತ್ತು. ಆದರೆ, ಚಿತ್ರ ಮುಂದಕ್ಕೆ ಹೋಗುತ್ತಿರುವ ಕುರಿತು, ಚಿತ್ರತಂಡದಿಂದ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ. ಇದೀಗ ಚಿತ್ರವು ಅಂದುಕೊಂಡಂತೆಯೇ ಅಕ್ಟೋಬರ್‍ 02ರಂದು ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲಂಸ್ ಸ್ಪಷ್ಟನೆ ನೀಡಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆಯು, ‘ಯೋಜನೆಯಂತೆ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ. ‘ಕಾಂತಾರ – ಚಾಪ್ಟರ್ 1’ ಚಿತ್ರವು ಪ್ರೇಕ್ಷಕರನ್ನು ಮತ್ತಷ್ಟು ಆಳವಾದ ಕಥೆ, ಸಂಸ್ಕೃತಿ ಮತ್ತು ದೈವಿಕ ಲೋಕಕ್ಕೆ ಕರೆದೊಯ್ಯಲಿದೆ. ಚಿತ್ರವು ಅಂದುಕೊಂಡ ದಿನಾಂಕದಂದೆ ತೆರೆಗೆ ಬರಲಿದೆ. ಯಾವುದೇ ಅನಧಿಕೃತ ಮಾಹಿತಿಗಳಿಗೆ ಕಿವಿಗೊಡದೆ ಅಧಿಕೃತ ಪ್ರಕಟಣೆಗಳನ್ನಷ್ಟೆ ನಂಬಲು ಚಿತ್ರತಂಡ ಮನವಿ ಮಾಡಿದೆ.

‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ನ ವಿಜಯ್‍ ಕಿರಗಂದೂರು ನಿರ್ಮಿಸುತ್ತಿದ್ದು, ಚಿತ್ರದ ಚಿತ್ರೀಕರಣ ಕಳೆದ ವರ್ಷದಿಂದ ಸತತವಾಗಿ ಕುಂದಾಪುರದ ಸುತ್ತಮುತ್ತ ಭರದಿಂದ ಸಾಗುತ್ತಿದೆ. ಚಿತ್ರದ ಕುರಿತು ಕಳೆದ ವರ್ಷ ಮಾಧ್ಯಮದವರೊಂದಿಗೆ ಮಾತನಾಡಿದ್ದ ರಿಷಭ್, ‘ಚಿತ್ರಕ್ಕಾಗಿ ಕುಂದಾಪುರ ಬಳಿ ದೊಡ್ಡ ಸ್ಟುಡಿಯೋ ಮಾಡಿ, ಅಲ್ಲಿ ಸೆಟ್‍ಗಳನ್ನು ಹಾಕಿ ಚಿತ್ರೀಕರಣ ಮಾಡುತ್ತಿದ್ದೇವೆ. ಈ ಚಿತ್ರಕ್ಕಾಗಿ 10 ಕೆಜಿ ತೂಕ ಹೆಚ್ಚಿಸಿ, ಆ ನಂತರ 8 ಕೆಜಿ ತೂಕ ಇಳಿಸಿದ್ದೇನೆ. ಈ ಚಿತ್ರಕ್ಕಾಗಿ ಕಲರಿಪಯಟ್ಟು ಕಲಿಯುತ್ತಿದ್ದೇನೆ. 100ಕ್ಕೂ ಹೆಚ್ಚು ದಿನಗಳ ಚಿತ್ರೀಕರಣವಾಗಲಿದೆ.

ಚಿತ್ರಕ್ಕೆ ಅರವಿಂದ್‍ ಕಶ್ಯಪ್‍ ಛಾಯಾಗ್ರಹಣ ಮತ್ತು ಅಜನೀಶ್ ‍ಲೋಕನಾಥ್‍ ಸಂಗೀತವಿದೆ. ಎಸ್‍.ಎಸ್‍. ರಾಜಮೌಳಿ ನಿರ್ದೇಶನನದ ‘RRR’ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದ ಬಲ್ಗೇರಿಯಾ ಮೂಲದ ಟೊಡರ್ ಲ್ಯಾಜರೋವ್, ‘ಕಾಂತಾರ’ ಚಿತ್ರಕ್ಕೂ ಸಾಹಸ ನಿರ್ದೇಶನ ಮಾಡಿದ್ದಾರೆ.

ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಬಿಡುಗಡೆಯಾಗಲಿದೆ.

ಹೆಚ್ಚಿನ ಓದಿಗೆ:-

  1. Дим, РґРѕР±СЂРѕРіРѕ времени суток, отпиши Р·Р° РїСЂРёС…РѕРґ, заказала тоже СЌР№С„-РґРёСЃСЃ, скажи, чего ожидать? https://linkin.bio/chewbupyc871 РЎ РїРѕРёСЃРєРѕРј клада РЅРµ было РЅРµ…

  2. Если Р±С‹ ещё доставка РЅРµ выпала РЅР° выходные – ждать пришлось Р±С‹ ещё меньше, так как курьерская служба РїРѕ выходным…

Leave a Reply

Your email address will not be published. Required fields are marked *