‘Kothalavadi’ ಬಿಡುಗಡೆ ದಿನಾಂಕ ಫಿಕ್ಸ್; ಆ. 1ಕ್ಕೆ ಯಶ್ ತಾಯಿ ನಿರ್ಮಾಣದ ಚಿತ್ರ
ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಪಕರಾಗಿರುವುದು ಗೊತ್ತೇ ಇದೆ. ಪುಷ್ಪಾ ಅವರು ಪಿ.ಎ ಪ್ರೊಡಕ್ಷನ್ಸ್ ಎಂಬ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿ, ಈ ನಿರ್ಮಾಣ ಸಂಸ್ಥೆಯಡಿ ‘ಕೊತ್ತಲವಾಡಿ’ (Kothalavadi) ಎಂಬ ಚೊಚ್ಚಲ ಚಿತ್ರ ನಿರ್ಮಿಸಿದ್ದಾರೆ. ಕಳೆದ ತಿಂಗಳು ಈ ಚಿತ್ರದ ಮೊದಲ ಪತ್ರಿಕಾಗೋಷ್ಠಿ ಸಹ ನಡೆದಿದ್ದು, ಚಿತ್ರದ ಬಗ್ಗೆ ಪುಷ್ಪಾ ಅವರು ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.
ಇದೀಗ ಈ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ಆಗಸ್ಟ್ 01ರಂದು ಈ ಚಿತ್ರ ಬಿಡುಗಡೆ ಆಗುತ್ತಿದೆ. ಹಿರಿಯ ನಿರ್ದೇಶಕರಾದ ಕೆ.ವಿ. ರಾಜು, ರವಿ ಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್, ‘ಕೊತ್ತಲವಾಡಿ’ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.
ಇದೊಂದು ಗ್ರಾಮೀಣ ಸೊಗಡಿನ ಚಿತ್ರವಾಗಿದ್ದು, ಪೃಥ್ವಿ ಅಂಬರ್ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.
‘ಕೊತ್ತಲವಾಡಿ’ ಚಿತ್ರಕ್ಕೆ ವಿಕಾಸ್ ವಸಿಷ್ಠ ಸಂಗೀತ, ಕಾರ್ತಿಕ್ ಎಸ್. ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆ ಇರುವ ಈ ಚಿತ್ರಕ್ಕೆ ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ.
‘ಕೊತ್ತಲವಾಡಿ’ ಚಿತ್ರದ ಟೀಸರ್ ಕಳೆದ ತಿಂಗಳು ಬಿಡುಗಡೆಯಾಗಿದ್ದು, ಶರಣ್ ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ:-
ಹೆಚ್ಚಿನ ಓದಿಗೆ:-
Hey hey, composed pom рi pi, maths гemains among in tһe leading topics dᥙring Junior College, establishing base tⲟ A-Level…
OMT’s bite-sized lessons stop overwhelm, allowing gradual love fߋr math to grow and influence constant exam prep work. Unlock youг…
Heya i am for the primary time here. I came across this board and I in finding It truly helpful…
Heya i am for the primary time here. I came across this board and I in finding It truly helpful…
Heya i am for the primary time here. I came across this board and I in finding It truly helpful…





**mindvault**
mindvault is a premium cognitive support formula created for adults 45+. It’s thoughtfully designed to help maintain clear thinking