ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರದಲ್ಲಿ ಕ್ರಾಂತಿಕಾರಿಯಾದ Rishab Shetty

ನಟ Rishab Shetty ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕಿಂತೆ ಬೇರೆ ಭಾಷೆಯ ಚಿತ್ರಗಳನ್ನೇ ಹೆಚ್ಚು ಒಪ್ಪುತ್ತಿದ್ದಾರೆ. ಇದಕ್ಕೂ ಮೊದಲು ಅವರು ‘ಜೈ ಹನುಮಾನ್’ ಮತ್ತು ‘ದಿ ಪ್ರೈಡ್ ಆಫ್ ಭಾರತ್ – ಛತ್ರಪತಿ ಶಿವಾಜಿ ಮಹಾರಾಜ್’ ಎಂಬ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ನಾಯಕನಾಗಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದು, ಆ ಚಿತ್ರಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ.
ಹೀಗಿರುವಾಗಲೇ, ರಿಷಭ್ ಇನ್ನೊಂದು ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಾಯಕನಾಗಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದು, ಈ ಚಿತ್ರವು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ತಯಾರಾಗಲಿದೆ. ಇದೊಂದು ಐತಿಹಾಸಿಕ ಚಿತ್ರವಾಗಿದ್ದು, ಈ ಚಿತ್ರದಲ್ಲಿ ರಿಷಭ್ ಕ್ರಾಂತಿಕಾರಿಯ ಪಾತ್ರ ನಿರ್ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ತೆಲುಗಿನ ಜನಪ್ರಿಯ ಹಾಗೂ ಯಶಸ್ವಿ ಚಿತ್ರ ನಿರ್ಮಾಣ ಸಂಸ್ಥೆ ಸಿತಾರಾ ಎಂಟರ್‌ಟೈನ್‌ಮೆಂಟ್ಸ್, ಇದೀಗ ಮತ್ತೊಂದು ದೊಡ್ಡ ಚಿತ್ರಕ್ಕೆ ಕೈಹಾಕಿದೆ. ‘ಪ್ರೊಡಕ್ಷನ್ ನಂಬರ್ 36’ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದು, ಈ ಮೂಲಕ ಕನ್ನಡ ಸಿನಿಮಾ ನಿರ್ಮಾಣಕ್ಕೆ ಪಾದಾರ್ಪಣೆ ಮಾಡುತ್ತಿದೆ.
ಐತಿಹಾಸಿಕ ಆಕ್ಷನ್ ಡ್ರಾಮಾ ಹಿನ್ನೆಲೆಯ ಈ ಚಿತ್ರದ ಘೋಷಣಾ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಸಿತಾರ ಎಂಟರ್‌ಟೈನ್‌ಮೆಂಟ್ ಹಾಗೂ ಫಾರ್ಚೂನ್ ಫೋರ್ ಸಿನೆಮಾಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. 18ನೇ ಶತಮಾನದ ಕಥೆ ಈ ಚಿತ್ರದಲ್ಲಿದ್ದು, ಈ ಐತಿಹಾಸಿಕ ಚಿತ್ರವನ್ನು ಅಶ್ವಿನ್ ಗಂಗರಾಜು ನಿರ್ದೇಶಿಸಲಿದ್ದಾರೆ.
ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಈ ಚಿತ್ರವನ್ನು ಚಿತ್ರೀಕರಿಸಲು ಪ್ಲಾನ್ ಮಾಡಲಾಗಿದೆ. ಇನ್ನುಳಿದಂತೆ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಿಗೆ ಡಬ್ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಇನ್ನುಳಿದಂತೆ ಈ ಸಿನಿಮಾದ ತಾಂತ್ರಿಕ ವರ್ಗದಲ್ಲಿ ಬಹುತೇಕ ಕನ್ನಡಿಗರು ಕೆಲಸ ಮಾಡುವುದರ ಜೊತೆಗೆ, ಬುಹುಬಾಗ ಚುತ್ರೀಕರಣ ಕರ್ನಾಟಕದಲ್ಲೇ ಮಾಡಲಾಗುವುದು.
ಚಿತ್ರದ ಘೋಷಣೆ ಈಗ ಆಗಿದೆಯಾದರೂ, ಚಿತ್ರ ಪ್ರಾರಂಭವಾಗುವುದಕ್ಕೆ ಸಾಕಷ್ಟು ಸಮಯವಿದೆ. ಅಕ್ಟೋಬರ್ 02ರಂದು ರಿಷಭ್ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರ ಬಿಡುಗಡೆಯಾಗಲಿದೆ. ಮುಂದಿನ ವರ್ಷ ‘ಜೈ ಹನುಮಾನ್’ ಮತ್ತು ‘ದಿ ಪ್ರೈಡ್ ಆಫ್ ಭಾರತ್ – ಛತ್ರಪತಿ ಶಿವಾಜಿ ಮಹಾರಾಜ್’ ಚಿತ್ರಗಳಲ್ಲಿ ನಟಿಸಿ, ಆ ನಂತರ ‘ಪ್ರೊಡಕ್ಷನ್ ನಂ 36’ ಚಿತ್ರದಲ್ಲಿ ರಿಷಭ್ ನಟಿಸುವ ಸಾಧ್ಯತೆ ಇದೆ.
ಇದನ್ನೂ ಓದಿ :-
ಹೆಚ್ಚಿನ ಓದಿಗಾಗಿ :-
best steroid to lose belly fat References: https://saveyoursite.date/story.php?title=dbol-cycle-unpacked-stacking-strategies-dosage-guidelines-and-managing-side-effects
how to get anabolic steroids References: https://www.google.com.ai/url?q=https://md.entropia.de/-4hAOsnWR7etCaKr2oeesQ/
steroid use body building References: https://maps.google.gg/url?q=https://socialbookmark.stream/story.php?title=metenolone-enanthate-primobolan-cycle-dosage-uses-and-potential-side-effects
legal steroid References: https://mensvault.men/story.php?title=mastering-deca-durabolin-a-smart-cycling-guide-for-maximum-muscle-gain
I am genuinely thankful to the owner of this site who has shared this wonderful piece of writing at here.
One thought on “ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರದಲ್ಲಿ ಕ್ರಾಂತಿಕಾರಿಯಾದ Rishab Shetty”