Darshan ಮತ್ತೆ ಜೈಲಿಗೆ; ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

Darshan

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್‍ಗೆ (Darshan) ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದೆ. ಹಾಗೆಯೇ, ಎಂಟು ತಿಂಗಳ ಬಳಿಗೆ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಬಂಧಿಸಿ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳಿಸಲಾಗಿದೆ.

ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಗುರುವಾರ ಮಹತ್ವದ ತೀರ್ಪು ನೀಡಿದೆ. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ, ಅವರನ್ನು ಬಂಧಿಸುವಂತೆ ಸೂಚಿಸಿದೆ.

ಸುಪ್ರೀಂ ಕೋರ್ಟ್ ಆದೇಶ ಬರುತ್ತಿದ್ದಂತೆಯೇ, ದರ್ಶನ್‍ ಅವರನ್ನು ಬಂಧಿಸಲು ಅನ್ನಪೂರ್ಣೇಶ್ವರಿ ಪೊಲೀಸ್‍ ಮುಂದಾಗಿದ್ದಾರೆ. ಆದರೆ, ದರ್ಶನ್‍ ಎಲ್ಲಿದ್ದಾರೆ ಎಂಬ ವಿಷಯದ ಕುರಿತು ಸಾಕಷ್ಟು ಗೊಂದಲವಿತ್ತು. ಮೊದಲು ದರ್ಶನ್‌ ಅವರು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಇತ್ತು. ಅಷ್ಟರಲ್ಲಿ ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ಅವರ ಅಪಾರ್ಟ್‌ಮೆಂಟ್‌ನಲ್ಲಿ ದರ್ಶನ್‍ ಇದ್ದಾರೆ ಎಂಬ ಮಾಹಿತಿ ಬರುತ್ತಿದ್ದಂತೆಯೇ, ಪೊಲೀಸರು ಅಪಾರ್ಟ್‌ಮೆಂಟ್‌ಗೆ  ತೆರಳಿ ಅವರನ್ನು ಅರೆಸ್ಟ್‌ ಮಾಡಿದ್ದಾರೆ.

ದರ್ಶನ್‍ ಮತ್ತು ಇತರರ ಬಂಧನವಾಗುತ್ತಿದ್ದಂತೆಯೇ, ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಗೆ ಕರೆತರಲಾಯಿತು. ಅಲ್ಲಿ ಆರೋಗ್ಯ ತಪಾಸಣೆ ಮಾಡಿಸಿ, ಕೋರಮಂಗಲದಲ್ಲಿರುವ 64ನೇ ಸಿಸಿಹೆಚ್ ಕೋರ್ಟ್‌ನ ನ್ಯಾಯಾಧೀಶರ ಮನೆಗೆ ಕರೆದೊಯ್ದು, ಜಡ್ಜ್ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಪಡಿಸಿದ ಆದೇಶ ಪ್ರತಿ ನ್ಯಾಯಾಧೀಶರಿಗೆ ಸಲ್ಲಿಸಲಯಾಯಿತು. ಈ ಪ್ರಕ್ರಿಯೆ ಮುಗಿದ ಬಳಿಕ ಎಲ್ಲಾ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು.

ಮೂರನೆಯ ಬಾರಿ. ಈ ಹಿಂದೆ ಸಹ ದರ್ಶನ್‌ ಎರಡು ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಮೊದಲನೆ ಬಾರಿ, 2011ರಲ್ಲಿ ತಮ್ಮ ಪತ್ನಿ ವಿಜಯಲಕ್ಷ್ಮಿಯವರ ಮೇಲೆ ಹಲ್ಲೆ ಮಾಡಿ ದರ್ಶನ್‌ ಸ್ವಲ್ಪ ದಿನಗಳ ಕಾಲ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಇನ್ನು, ಎರಡನೇ ಬಾರಿ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಅವರನ್ನು ಪರಪ್ಪನ ಅಗ್ರಹಾರದಲ್ಲಿ ಇರಿಸಲಾಗಿತ್ತು. ಜೈಲಿನಲ್ಲಿ ರಾಜಾತಿಥ್ಯದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿ ಜೈಲಿಗೆ ರವಾನಿಸಲಾಗಿತ್ತು. ಆ ನಂತರ ಅವರು ಹೈಕೋರ್ಟ್‌ನಿಂದ ಜಾಮೀನು ಪಡೆದು ಹೊರಗೆ ಬಂದಿದ್ದರು. ಇದೀಗ ಜಾಮೀನು ರದ್ದಾದ ಬೆನ್ನಲ್ಲೇ ಮೂರನೇ ಬಾರಿಗೆ ದರ್ಶನ್‌ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.


ಇದನ್ನೂ ಓದಿ :-


ಹೆಚ್ಚಿನ ಓದಿಗಾಗಿ :-

  1. Обращайтесь к нам снова https://bio.site/kkediogi конспирация достойная, товар оказался отличным, кроли заценили. будем еще работать


One thought on “Darshan ಮತ್ತೆ ಜೈಲಿಗೆ; ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

Leave a Reply

Your email address will not be published. Required fields are marked *

ಪುನಃ ಪುನಃ ನೋಡಿದರು,,,,ಎಂದ ಹಾಗೆ ವಿಭಿನ್ನ Lookನಲ್ಲಿ ರಮೇಶ್‌ ಅರವಿಂದ್‌ ಶಿವರಾಜ್‍ಕುಮಾರ್ ಹೊಸ ಚಿತ್ರ ‘ಡ್ಯಾಡ್‍’; ಡಾಕ್ಟರ್ ಪಾತ್ರದಲ್ಲಿ ನಟನೆ ಸುಳ್ಳು ಸುದ್ದಿ ನಿಜವಾಗುವ ಕಾಲ ಬಂದೇ ಬಡ್ತಾ..! ಯುವ ರಾಜ್‌ಕುಮಾರ್‌ ಜೊತೆ ಎಕ್ಕದಲ್ಲಿ ಸಂಜನಾ ಆನಂದ್‌ ರಾಧಿಕಾ ನಾರಾಯಣ್ ಅಭಿನಯಿಸಿದ ಕನ್ನಡ ಚಲನಚಿತ್ರ “ರಂಗಿತರಂಗ” ಮತ್ತೆ ಬೆಳ್ಳಿತೆರೆಗೆ