‘ರಾಮಾಯಣ’ ಚಿತ್ರೀಕರಣಕ್ಕೂ ಮುನ್ನ ಉಜ್ಜಯಿನಿ ಮಹಾಕಾಳೇಶ್ವರ ದರ್ಶನ ಪಡೆದ Yash

ಟಾಕ್ಸಿಕ್’ (Toxic) ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿರುವ ಯಶ್, ಇದೀಗ ‘ರಾಮಾಯಣ’(Ramayana) ಚಿತ್ರದಲ್ಲಿ ಸಿದ್ಧತೆ ನಟಿಸುವುದಕ್ಕೆ ಸಿದ್ಧತೆ ನಡೆಸುತ್ತಿರುವ ಸುದ್ದಿ ಬಂದಿದೆ. ಸದ್ಯದಲ್ಲೇ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಯಶ್, ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ಬಂದಿದ್ದಾರೆ.
‘ರಾಮಾಯಣ – ಭಾಗ 1’ (Ramayana Part 1) ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ರಣಬೀರ್ ಕಪೂರ್ ಸೇರಿದಂತೆ ಹಲವು ಕಲಾವಿದರ ಭಾಗದ ಚಿತ್ರೀಕರಣ ನಡೆಸಲಾಗಿದೆ. ‘ಟಾಕ್ಸಿಕ್’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದ ಕಾರಣ, ಯಶ್ ಚಿತ್ರೀಕರಣದಲ್ಲಿ ಭಾಗವಹಿಸಿರಲಿಲ್ಲ. ಯಶ್ ಭಾಗದ ಚಿತ್ರೀಕರಣ ಮುಂದಿನ ವಾರದಿಂದ ಮುಂಬೈನಲ್ಲಿ ಪ್ರಾರಂಭವಾಗಲಿದೆಯಂತೆ.
ಈ ಭಾಗದ ಚಿತ್ರೀಕರಣದಲ್ಲಿ ಯಶ್ ಭಾಗವಹಿಸುತ್ತಿದ್ದು, ಅದಕ್ಕೂ ಮೊದಲು ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೈವಿಕ ಆಶೀರ್ವಾದವನ್ನು ಪಡೆದಿದ್ದಾರೆ. ತಾನು ಶಿವನ ಭಕ್ತನಾದ್ದಿಂದ, ತಮ್ಮ ಮನೆ ದೇವರು ಈಶ್ವರನಾದ್ದರಿಂದ ಇಲ್ಲಿಗೆ ಬಂದು ದರ್ಶನ ಪಡೆದಿದ್ದಾಗಿ ಹೇಳಿಕೊಂಡಿದ್ದಾರೆ. ದೇವರ ದರ್ಶನ ಪಡೆದ ನಂತರ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ.
‘ದಂಗಲ್’ ಚಿತ್ರವನ್ನು ನಿರ್ದೇಶಿಸಿದ್ದ ನಿತೀಶ್ ತಿವಾರಿ, ‘ರಾಮಾಯಣ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿಪಲ್ಲವಿ, ಆಂಜನೇಯನಾಗಿ ಸನ್ನಿ ಡಿಯೋಲ್ ನಟಿಸುತ್ತಿದ್ದಾರೆ. ರಾವಣನಾಗಿ ಯಶ್ ಅಭಿನಯಿಸುತ್ತಿರುವುದು ವಿಶೇಷ.
‘ರಾಮಯಾಣ’ ಚಿತ್ರದಲ್ಲಿ ಯಶ್ ಬರೀ ನಟರಷ್ಟೇ ಅಲ್ಲ, ಸಹನಿರ್ಮಾಪಕರೂ ಹೌದು. ಈ ಚಿತ್ರವನ್ನು ಪ್ರೈಮ್ ಫೋಕಸ್ ಸಂಸ್ಥೆಯ ನಮಿತ್ ಮಲ್ಹೋತ್ರಾ ಮತ್ತ ಯಶ್ ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದ್ದು, ಮೊದಲ ಭಾಗ 2026ರ ದೀಪಾವಳಿಗೆ ಬಿಡುಗಡೆಯಾದರೆ, ಎರಡನೆಯ ಭಾಗ 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ.
ಇದನ್ನೂ ಓದಿ:-
One thought on “‘ರಾಮಾಯಣ’ ಚಿತ್ರೀಕರಣಕ್ಕೂ ಮುನ್ನ ಉಜ್ಜಯಿನಿ ಮಹಾಕಾಳೇಶ್ವರ ದರ್ಶನ ಪಡೆದ Yash”