Golden Star Ganesh; ಇದುವರೆಗೂ ಮಾಡದ ವಿಭಿನ್ನ ಪಾತ್ರದಲ್ಲಿ ಗಣೇಶ್; ಯಾವ ಪಾತ್ರ ಅದು?

ಗಣೇಶ್ ಚಿತ್ರಗಳೆಂದರೆ ಅದೇ ರೊಮ್ಯಾಂಟಿಕ್ ಕಾಮಿಡಿಗಳು, ಒಂದೇ ತರಹದ ವಿಭಿನ್ನ ಹೆಸರಿನ ಚಿತ್ರಗಳು ಎಂದು ಹಣೆಪಟ್ಟಿ ಇತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಗಣೇಶ್ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಬೇರೆ ತರಹದ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಪಿನಾಕ’ ಚಿತ್ರದಲ್ಲಿ ಒಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಾಗಿ ಗಣೇಶ್ (golden star ganesh) ಹೇಳಿಕೊಂಡಿದ್ದರು. ಈಗ ಹೊಸ ಚಿತ್ರದಲ್ಲೂ ಇದುವರೆಗೂ ಮಾಡದ ಒಂದು ವಿಭಿನ್ನ ಪಾತ್ರದಲ್ಲಿ ನಟಿಸುತ್ತಿರುವುದಾಗಿ ಗಣೇಶ್ ಹೇಳಿಕೊಂಡಿದ್ದಾರೆ.
ಅಂದಹಾಗೆ, ಗಣೇಶ್ ಅಭಿನಯದ ಹೊಸ ಚಿತ್ರ ಭಾನುವಾರ ಸೆಟ್ಟೇರಿದೆ. ಅರಸು ಅಂತಾರೆ ನಿರ್ದೇಶನದ ಈ ಚಿತ್ರವನ್ನು ಎಸ್.ಎನ್.ಟಿ ಎಂಟರ್ಪ್ರೈಸ್ ಲಾಂಛನದಲ್ಲಿ ಎಸ್.ಸಿ. ರವಿ ಭದ್ರಾವತಿ ನಿರ್ಮಿಸುತ್ತಿದ್ದು, ಗೀತರಚನೆಕಾರ ಅರಸು ಅಂತಾರೆ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯಕ್ಕೆ ‘ಪ್ರೊಡಕ್ಷನ್ ನಂಬರ್ ಒನ್’ ಎಂದು ಕರೆಯಲಾಗುತ್ತಿರುವ ಈ ಚಿತ್ರದಲ್ಲಿ ಗಣೇಶ್, ರಂಗಾಯಣ ರಘು ಮುಂತಾದವರು ಹಾಜರಿದ್ದರು.
ಅರಸು ಅಂತಾರೆ ಇದಕ್ಕೂ ಮುನ್ನ ‘ಲವ್ ಇನ್ ಮಂಡ್ಯ’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈಗ ಒಂದು ದಶಕದ ನನ್ನ ನಂತರ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಕುರಿತು ಮಾತನಾಡುವ ಅವರು, ‘ಚಿತ್ರವನ್ನು ಅಂದುಕೊಂಡ ಹಾಗೆ ಮಾಡಬೇಕು ಎನ್ನುವುದು ನನ್ನ ಉದ್ದೇಶ. ಹಾಗಾಗಿ ಎರಡನೇ ಚಿತ್ರವನ್ನು ನಿರ್ದೇಶಿಸಲು ಇಷ್ಟು ಸಮಯವಾಯಿತು. ಈ ಚಿತ್ರದ ಕಥೆ ವಿಭಿನ್ನವಾಗಿದೆ. ಗಣೇಶ್ ಅವರು ಇದುವರೆಗೂ ಮಾಡಿರದ ಪಾತ್ರ ಹಾಗೂ ಕಥೆ ಅಂತ ಹೇಳಬಹುದು. ರಾಮನವಮಿ ಶುಭದಿನ ಚಿತ್ರಕ್ಕೆ ಚಾಲನೆ ದೊರಕಿದೆ. ಸದ್ಯದಲ್ಲೇ ಶೀರ್ಷಿಕೆ ಅನಾವರಣ ಮಾಡುತ್ತೇವೆ. ಗಣೇಶ್ ಅವರಿಗೆ ನಾಯಕಿಯಾಗಿ ಕನ್ನಡದವರೆ ಆದ ‘ಹನುಮ್ಯಾನ್’ ಖ್ಯಾತಿಯ ಅಮೃತ ಅಯ್ಯರ್ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ ಮುಂತಾದವರು ನಟಿಸುತ್ತಿದ್ದಾರೆ’ ಎಂದರು.
ಗಣೇಶ್‍ಗೆ ಅರಸು ಅಂತಾರೆ 2019ರಲ್ಲಿ ಕಥೆ ಹೇಳಲು ಬಂದರಂತೆ. ‘ಆನಂತರ ಕೋವಿಡ್ ಮುಂತಾದ ಕಾರಣದಿಂದ ಆಗ ಕಥೆ ಕೇಳಲು ಆಗಿರಲಿಲ್ಲ. ಇತ್ತೀಚೆಗೆ ಅರಸು ಅವರು ಈ ಚಿತ್ರದ ಕಥೆ ಹೇಳಿದಾಗ ಕೇಳಿ ಬಹಳ ಇಷ್ಟವಾಯಿತು. ನಾನು ಇದುವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಬಹಳ ದಿನಗಳಿಂದ ಪರಿಚಯವಿರುವ ಭದ್ರಾವತಿ ರವಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡದಲ್ಲಿ ತುಂಬಾ ಒಳ್ಳೆಯ ಬರಹಗಾರರಿದ್ದಾರೆ. ಅವರೆಲ್ಲಾ ಸಿನಿಮಾ ಮಾಡಲು ಮುಂದೆ ಬರಬೇಕು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಖಂಡಿತ ಜನರು ಚಿತ್ರಮಂದಿರಕ್ಕೆ ಬರುತ್ತಾರೆ’ ಎಂದರು ನಾಯಕ ಗಣೇಶ್. ಇಷ್ಟಕ್ಕೂ ಗಣೇಶ್ ಒಪ್ಪಿರುವ ವಿಭಿನ್ನ ಪಾತ್ರ ಹೇಗಿದೆ ಎಂಬ ವಿಷಯವನ್ನು ಅವರು ಬಹಿರಂಗಗೊಳಿಸಲಿಲ್ಲ. ಚಿತ್ರದಲ್ಲೇ ನೋಡಿ ಎಂದು ಮಾತು ಮುಗಿಸಿದರು.
ಅಮೃತಾ ಅಯ್ಯರ್ ಮೂಲತಃ ಕನ್ನಡದವರಂತೆ. ‘ನಾನು ಕನ್ನಡದ ಹುಡುಗಿ. ಕನ್ನಡದಲ್ಲಿ ಇದು ಮೊದಲ ಚಿತ್ರ. ನಿರ್ದೇಶಕರು ಹೇಳಿದ ಕಥೆ ಹಾಗೂ ನನ್ನ ಪಾತ್ರ ಇಷ್ಟವಾಯಿತು. ಗಣೇಶ್ ಅವರೊಂದಿಗೆ ನಟಿಸುತ್ತಿರುವುದಕ್ಕೆ ಖುಷಿಯಾಗಿದೆ’ ಎಂದರು ಅಮೃತಾ ಅಯ್ಯರ್.
ಅರಸು ಅಂತಾರೆ ಕಥೆಗೆ ಮಹೇಶ್ ದೇವ್ ಡಿ.ಎನ್.ಪುರ ಚಿತ್ರಕಥೆ ಹಾಗೂ ಕ್ರಾಂತಿ ಕುಮಾರ್ ಹಾಗೂ ಶೈಲೇಶ್ ಕುಮಾರ್ ಸಂಭಾಷಣೆ ಬರೆಯುತ್ತಿದ್ದಾರೆ. ಸುಜ್ಞಾನ್ ಛಾಯಾಗ್ರಹಣ, ಅಕ್ಷಯ್ ಪಿ. ರಾವ್ ಸಂಕಲನ ಚಿತ್ರಕ್ಕಿದ್ದು, ಈಗಾಗಲೇ ಮೊದಲ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ.
- Preethi Prema Panganama; ಪ್ರೀತಿ, ಪ್ರೇಮ ಮಾಡಿ ಪಂಗನಾಮ ಹಾಕಲು ಹೊರಟವರ ಕಥೆ ಇದು …
- Puppy; ಇಬ್ಬರು ಬಾಲಕರು ಹಾಗೂ ಶಾನ್ವದ ಸುತ್ತ ಸಾಗುವ ‘ಪಪ್ಪಿ’ ಮೇ1ಕ್ಕೆ ಬಿಡುಗಡೆ
- Yuva Rajkumar Ekka; ‘ಎಕ್ಕ’ದಲ್ಲಿ ಪುನೀತ್ ಅವರನ್ನು ನೆನಪಿಸಿದ ಯುವ ರಾಜಕುಮಾರ್
- Yuddakanda box office collection; ಗಳಿಕೆ ಗೊತ್ತಿಲ್ಲ, ಒಳ್ಳೆಯ ಪ್ರಯತ್ನ ಗೆದ್ದಿದೆ ಎಂದ ಅಜೇಯ್ ರಾವ್
- ತುಳು ಭಾಷೆಯ ‘Daskath’, ಈಗ ಕನ್ನಡಕ್ಕೆ ಡಬ್ ಆಗಿ ಬಿಡುಗಡೆ
[…] […]
[…] Yuddakanda box office collection; ಗಳಿಕೆ ಗೊತ್ತಿಲ್ಲ, ಒಳ್ಳೆಯ ಪ್ರಯತ್ನ ಗೆದ್ದಿದೆ ಎಂದ ಅಜೇಯ್ ರಾವ್ […]
[…] Yuva Rajkumar Ekka; ‘ಎಕ್ಕ’ದಲ್ಲಿ ಪುನೀತ್ ಅವರನ್ನು ನೆನಪಿಸಿದ ಯುವ ರಾಜಕುಮಾರ್ […]
[…] ತುಳು ಭಾಷೆಯ ‘Daskath’, ಈಗ ಕನ್ನಡಕ್ಕೆ ಡಬ್ ಆಗಿ ಬಿಡುಗಡೆ […]
[…] […]