admin

Sathish Ninasam The Rise of Ashoka

The Rise of Ashoka; ‘ಅಶೋಕ ಬ್ಲೇಡ್‍’ ಈಗ ‘ದಿ ರೈಸ್ ಆಫ್ ಅಶೋಕ’; ಸದ್ಯದಲ್ಲೇ ಚಿತ್ರೀಕರಣ

ಸತೀಶ್ ನೀನಾಸಂ ಅಭಿನಯದಲ್ಲಿ ಎರಡೂವರೆ ವರ್ಷಗಳ ಹಿಂದೆ ‘ಅಶೋಕ ಬ್ಲೇಡ್‍’ ಚಿತ್ರ ಪ್ರಾರಂಭವಾಗಿದ್ದು ನೆನಪಿರಬಹುದು. ಚಿತ್ರದ ಚಿತ್ರೀಕರಣ ಸಹ ಬಹುತೇಕ ಮುಗಿದಿತ್ತು. ಆದರೆ, ಆ ಚಿತ್ರದ ಬಜೆಟ್‍ ಹೆಚ್ಚಾದ್ದರಿಂದ ನಿರ್ದೇಶಕ ಮತ್ತು ನಿರ್ಮಾಪಕರಲ್ಲೊಬ್ಬರಾದ ವಿನೋದ್‍ ಧೋಂಡಾಳೆ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡರು. ಇನ್ನು, ಚಿತ್ರ ಪ್ರಾರಂಭವಾಗುವುದಿಲ್ಲ ಎಂಬ ಮಾತುಗಳು ಹರಿದಾಡುತ್ತಿರುವಾಗಲೇ ಚಿತ್ರ ಪುನಃ ಶುರುವಾಗುತ್ತಿರುವ ಸುದ್ದಿ ಇದೆ. ‘ಅಶೋಕ ಬ್ಲೇಡ್‍’ ಚಿತ್ರಕ್ಕೆ ‘ದಿ ರೈಸ್ ಆಫ್ ಅಶೋಕ’ ಎಂಬ ಹೆಸರನ್ನು ಇಡಲಾಗಿದ್ದು, ಈ ಶೀರ್ಷಿಕೆಯಲ್ಲೇ ಚಿತ್ರ ಬಿಡುಗಡೆಯಾಗಲಿದೆ….

Read More
Sanju Weds Geetha 2

ಮುಂದಕ್ಕೆ ಹೋಯ್ತು ‘ಸಂಜು ವೆಡ್ಸ್ ಗೀತಾ 2’; ಈ ವಾರ ಬಿಡುಗಡೆ ಇಲ್ಲ

ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್‍ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಬಿಡುಗಡೆ ಅನಿವಾರ್ಯ ಕಾರಣಗಳಿಂದ ಮುಂದಕ್ಕೆ ಹೋಗಿದೆ. ಚಿತ್ರದ ಹೊಸ ಬಿಡುಗಡೆ ದಿನಾಂಕ ಇನ್ನಷ್ಟೇ ಘೋಷಣೆಯಾಗಬೇಕಿದ್ದು, ಸದ್ಯದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಎರಡು ದಿನಗಳ ಹಿಂದೆಯೇ ಚಿತ್ರದ ಬಿಡುಗಡೆ ಅನುಮಾನ ಎಂಬ ಸುದ್ದಿಯೂ ಕೇಳಿಬಂದಿತ್ತು. ಅದಕ್ಕೆ ಕಾರಣ, ಸ್ಟೇ ಆರ್ಡರ್‍ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ನಿರ್ಮಾಪಕರು ಫೈನಾನ್ಶಿಯರ್‌ಗಳ…

Read More
Adhipatra - Roopesh Shetty

ಕರಾವಳಿ ಕಥೆಯೊಂದಿಗೆ ಬಂದ್ರು ರೂಪೇಶ್‍ ಶೆಟ್ರು; ಫೆಬ್ರವರಿ 07ಕ್ಕೆ ‘ಅಧಿಪತ್ರ’

‘ಬಿಗ್‍ ಬಾಸ್‍’ ಖ್ಯಾತಿಯ ರೂಪೇಶ್‍ ಶೆಟ್ಟಿ ಇದುವರೆಗೂ ಒಂದಿಷ್ಟು ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರೂ, ಪೂರ್ಣಪ್ರಮಾಣದ ನಾಯಕನಾಗಿ ಕಾಣಿಸಿಕೊಂಡಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ರೂಪೇಶ್, ಕನ್ನಡ ಚಿತ್ರವೊಂದರಲ್ಲಿ ಪೂರ್ಣಪ್ರಮಾಣದ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷವೇ ಪ್ರಾರಂಭವಾಗಿದ್ದ ಈ ಚಿತ್ರ, ಇದೀಗ ಫೆಬ್ರವರಿ 07ರಂದು ಬಿಡುಗಡೆ ಆಗುತ್ತಿದೆ. ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತ ಹಿನ್ನೆಲೆಯಾಗಿಸಿಕೊಂಡು ‘ಅಧಿಪತ್ರ’ ಚಿತ್ರದ ಕಥೆಯನ್ನು ಹೆಣೆಯಲಾಗಿದೆಯಂತೆ. ಈ ಚಿತ್ರದಲ್ಲಿ ರೂಪೇಶ್‍ ಶೆಟ್ಟಿ ಪೊಲೀಸ್‍ ಅಧಿಕಾರಿಯಾಗಿ ಕಾಣಿಸಿಕೊಂಡಿರುವುದು ವಿಶೇಷ….

Read More
Sanju Weds Geetha 2

Sanju Weds Geetha 2; ‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ಕಥೆ ಕೊಟ್ಟಿದ್ದು ಯಾರು?

ನಾಗಶೇಖರ್‍ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ನಾಳೆ (ಜನವರಿ 10)ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಹೀಗಿರುವಾಗಲೇ ಚಿತ್ರಕ್ಕೆ ನಿಜಕ್ಕೂ ಕಥೆ ಕೊಟ್ಟಿದ್ದು ಯಾರು? ಎಂಬ ಪ್ರಶ್ನೆಯೊಂದು ಕೇಳಿಬರುತ್ತಿದೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರು ಎದುರಿಸುತ್ತಿರುವ  ಹಲವಾರು ಸಮಸ್ಯೆಗಳ ಜತೆಗೊಂದು ಪ್ರೇಮ ಕಾವ್ಯವನ್ನು ಹೇಳುವ ಪ್ರಯತ್ನ ಮಾಡಿದ್ದಾರೆ. ಈ ಚಿತ್ರದ ಎಳೆಯನ್ನು ಕೊಟ್ಟವರು ಸುದೀಪ್‍ ಎಂದು ನಾಗಶೇಖರ್‍ ಕಳೆದ ವಾರ ನಡೆದ ಚಿತ್ರದ ಹಾಡು ಬಿಡಗುಡೆ ಸಮಾರಂಭದಲ್ಲಿ ಹೇಳಿಕೊಂಡಿದ್ದರು. ಆದರೆ,…

Read More