admin

Unlock Raghava Lock Lock Song

Unlock Raghava; ಶಿವಮೊಗ್ಗದ ಭಾರತ್ ಸಿನಿಮಾಸ್‍ನಲ್ಲಿ ಬಿಡುಗಡೆ ಆಯಿತು ‘ಲಾಕ್ ಲಾಕ್’ ಹಾಡು

ಮಿಲಿಂದ್‍ ಮತ್ತು ರಚೆಲ್‍ ಡೇವಿಡ್‍ ಅಭಿನಯದ ‘ಅನ್‍ಲಾಕ್‍ ರಾಘವ’ ಚಿತ್ರವು ಫೆಬ್ರವರಿ 07ರಂದು ಬಿಡುಗಡೆಯಾಗಲಿದೆ. ಈ ಮಧ್ಯೆ, ಚಿತ್ರದ ‘ಲಾಕ್‍ ಲಾಕ್‍’ ಎಂಬ ಹಾಡು ಶಿವಮೊಗ್ಗದ ಭಾರತ್‍ ಸಿನಿಮಾಸ್‍ನಲ್ಲಿ ಮಂಗಳವಾರ ಬೆಳಿಗ್ಗೆ ಬಿಡುಗಡೆಯಾಗಿದೆ. ‘ಲಾಕ್‍ ಲಾಕ್‍ …’ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ರಚಿಸಿದ್ದು, ಅನೂಪ್‍ ಸೀಳಿನ್‍ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿಯಾಗಿದ್ದು, ಎ2 ಮ್ಯೂಸಿಕ್‍ ಚಾನಲ್‍ನಲ್ಲಿ ಬಿಡುಗಡೆಯಾಗಿದೆ. ಇದು ಈ ಚಿತ್ರದಿಂದ ಬಿಡುಗಡೆಯಾಗುತ್ತಿರುವ ಚಿತ್ರದ ಎರಡನೇ ಹಾಡಾಗಿದೆ. ಈ ಹಾಡಿನಲ್ಲಿ ನೋಡಿರುವ…

Read More
UI OTT Release

ಸದ್ಯ ಓಟಿಟಿಯಲ್ಲಿ ‘UI’ ಇಲ್ಲ; ಸ್ಪಷ್ಟನೆ ಕೊಟ್ಟ ನಿರ್ಮಾಪಕರು

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘UI’ ಚಿತ್ರವು ಡಿಸೆಂಬರ್‍ 20ರಂದು ಬಿಡುಗಡೆಯಾಗಿ, ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಮಧ್ಯೆ, ಚಿತ್ರವು ಸದ್ಯದಲ್ಲೇ ಸನ್‍ ನೆಕ್ಸ್ಟ್ ಓಟಿಟಿಯಲ್ಲಿ ಪ್ರಸಾರವಾಗಲಿದೆ ಎಂಬ ಸುದ್ದಿಯೊಂದು ಓಟಿಟಿಯಲ್ಲಿ ಕೇಳಿಬಂದಿತ್ತು. ಆದರೆ, ಈ ಸುದ್ದಿ ಸುಳ್ಳು ಎಂದು ನಿರ್ಮಾಪಕರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಸ್ಪಷ್ಟನೆ ಕೊಟ್ಟಿರುವ ಚಿತ್ರದ ನಿರ್ಮಾಪಕರಲ್ಲೊಬ್ಬರಾದ ಕೆ.ಪಿ. ಶ್ರೀಕಾಂತ್‍, ‘ಚಿತ್ರದ ೋಟಿಟಿ ಹಕ್ಕುಗಳನ್ನು ಸನ್‍ ನೆಕ್ಸ್ಟ್ ಸಂಸ್ಥೆಯು ಖರೀದಿಸಿದೆ ಮತ್ತು ಚಿತ್ರವು ಸದ್ಯದಲ್ಲೇ, ಆ ಓಟಿಟಿಯಲ್ಲಿ ಸ್ಟ್ರೀಮ್‍…

Read More
Gajarama

ಫೆಬ್ರವರಿ 7ರಂದು ‘ಗಜರಾಮ’ನಾಗಿ ಬರಲಿದ್ದಾರೆ ರಾಜವರ್ಧನ್‍

ಕಳೆದ ವರ್ಷದ ಕೊನೆಯ ಶುಕ್ರವಾರದಂದು ರಾಜವರ್ಧನ್‍ ಅಭಿನಯದ ‘ಗಜರಾಮ’ ಚಿತ್ರವು ಬಿಡಗುಡೆಯಾಗಬೇಕಿತ್ತು. ಆದರೆ, ಡಿ. 25ರಂದು ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಬಿಡುಗಡೆಯಾದ ಕಾರಣ, ಅಂದು ‘ಗಜರಾಮ’ ಬರಲಿಲ್ಲ. ಮುಂದೆ ಯಾವಾಗ? ಎಂದು ಎಲ್ಲರೂ ಕೇಳುವಾಗಲೇ, ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಇದೀಗ ಚಿತ್ರತಂಡ ಘೋಷಣೆ ಮಾಡಲಾಗಿದೆ. ‘ಗಜರಾಮ’ ಚಿತ್ರವನ್ನು ಫೆಬ್ರವರಿ 07ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದ್ದು, ಅದರಂತೆ ಅಂದು ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅಂದು ‘ಗಜರಾಮ’ನಷ್ಟೇ ಅಲ್ಲ, ‘ಅನ್‍ಲಾಕ್‍ ರಾಘವ’, ‘ಎಲ್ಲೋ ಜೋಗಪ್ಪ ನಿನ್ನರಮನನೆ’,…

Read More
Theertharoopa-Thandeyavarige-Rachana-Inder

Theertha Roopa Thandeyavarige ;ಅಕ್ಷರಳಾದ ರಚನಾ ಇಂದರ್; ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ನಾಯಕಿ ಸಿಕ್ಕಾಯ್ತು!

‘ಹೊಂದಿಸಿ ಬರೆಯಿರಿ’ ಚಿತ್ರದ ನಂತರ ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಮತ್ತೊಂದು ಚಿತ್ರ ‘ತೀರ್ಥರೂಪ ತಂದೆಯವರಿಗೆ’. ಈ ಚಿತ್ರ ಕಳೆದ ವರ್ಷವೇ ಪ್ರಾರಂಭವಾಗಿ ಒಂದಿಷ್ಟು ಚಿತ್ರದ ಚಿತ್ರೀಕರಣ ಸಹ ಆಗಿತ್ತು. ಆದರೆ, ಚಿತ್ರದ ನಾಯಕಿ ಯಾರು ಎಂಬ ವಿಷಯವನ್ನು ಚಿತ್ರತಂಡದವರು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಚಿತ್ರಕ್ಕೆ ರಚನಾ ಇಂದರ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ಡಾರ್ಲಿಂಗ್‍’ ಕೃಷ್ಣ ಅಭಿನಯದ ಮತ್ತು ನಿರ್ದೇಶನದ ‘ಲವ್‍ ಮಾಕ್ಟೇಲ್‍’ ಚಿತ್ರದ ಮೂಲಕ ಜನಪ್ರಿಯರಾದವರು ರಚನಾ ಇಂದರ್‍. ಆ ಚಿತ್ರದಲ್ಲಿ ಅವರ ‘ಹೆಂಗೆ ನಾವು …’ ಎಂಬ ಸಂಭಾಷಣೆಯಿಂದ…

Read More