Golden Star Ganesh ಅಭಿನಯದಲ್ಲಿ ‘ಭರ್ಜರಿ’ ಚೇತನ್ ಹೊಸ ಚಿತ್ರ; ಅಕ್ಟೋಬರ್‌ನಲ್ಲಿ ಪ್ರಾರಂಭ

ಸುಮಾರು ಎರಡು ವರ್ಷಗಳ ಹಿಂದೆ ಶುರುವಾಗಿತ್ತು ‘ಭರ್ಜರಿ’ ಚೇತನ್ ನಿರ್ದೇಶನದ ಹೊಸ ಚಿತ್ರ ‘ಬರ್ಮ’. ಆ ಚಿತ್ರವನ್ನು ಆದಷ್ಟು ಬೇಗ ಮುಗಿಸಿ, ಬಿಡುಗಡೆ ಮಾಡುವುದಾಗಿ ಚೇತನ್ ಹೇಳಿದ್ದರು. ಆದರೆ, ಕಾರಣಾಂತರಗಳಿಂದ ಚಿತ್ರ ಇನ್ನೂ ಬಿಡುಗಡೆಯಾಗಿರಲಿಲ್ಲ. ಆ ಚಿತ್ರ ಯಾವಾಗ ಬಿಡುಗಡೆಯೋ ಗೊತ್ತಿಲ್ಲ. ಅದಕ್ಕೂ ಮೊದಲೇ ಗಣೇಶ್ (Golden Star Ganesh) ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಅವರು ಘೋಷಿಸಿದ್ದಾರೆ.
ಇಂದು ಗಣೇಶ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಗಣೇಶ್ ಅಭಿನಯದ ಹೊಸ ಚಿತ್ರದ ಘೋಷಣೆಯಾಗಿದ್ದು, ಈ ಚಿತ್ರವನ್ನು ಚೇತನ್ ನಿರ್ದೇಶನ ಮಾಡಿದರೆ, ಎಂ. ಮುನೇಗೌಡ ನಿರ್ಮಿಸುತ್ತಿದ್ದಾರೆ. ಇದು ಅವರ ಮೂರನೇ ಚಿತ್ರ. ‘ಭುವನಂ ಗಗನಂ’ ಮತ್ತು ‘ಅಯೋಗ್ಯ 2’ ಚಿತ್ರಗಳನ್ನು ಮುನೇಗೌಡ ನಿರ್ಮಿಸಿದ್ದಾರೆ.

ಎಸ್.ವಿ.ಸಿ ಫಿಲಂಸ್ ಲಾಂಛನದಲ್ಲಿ ಎಂ.ಮುನೇಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಗಣೇಶ್ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಣೆಯಾಗಿದೆ. ಈ ಹೊಸ ಚಿತ್ರದ ಚಿತ್ರೀಕರಣ ಅಕ್ಟೋಬರ್ ನಲ್ಲಿ ಆರಂಭವಾಗಲಿದೆ. ಶಿವು ಗೌಡ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ‘ಪ್ರೊಡಕ್ಷನ್ ನಂ ೩’ ಚಿತ್ರದ ತಾರಾಬಳಗ ಹಾಗೂ ತಂತ್ರಜ್ಞರ ಕುರಿತು ಹೆಚ್ಚಿನ ಮಾಹಿತಿ ಸದ್ಯದಲ್ಲೇ ಹೊರ ಬೀಳಲಿದೆ.

ಇನ್ನು, ಗಣೇಶ್ ಹುಟ್ಟುಹಬ್ಬದ ಪ್ರಯುಕ್ತ ಎಸ್.ಎನ್.ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್.ಸಿ. ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಅರಸು ಅಂತಾರೆ ನಿರ್ದೇಶಿಸುತ್ತಿರುವ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಆಗಿದೆ. ಚಿತ್ರತಂಡವು ಚಿತ್ರದ ಹೆಸರು ಅನಾವರಣ ಮಾಡುವುದರ ಜೊತೆಗೆ, ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಗಣೇಶ್ ಅವರಿಗೆ ಶುಭ ಕೋರಿದೆ.
ಈ ಚಿತ್ರಕ್ಕೆ ‘ಡಿಜಾಂಗೋ ಕೃಷ್ಣಮೂರ್ತಿ’ ಎಂಬ ಹೆಸರಿಡಲಾಗಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣವಾಗಿದ್ದು, ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದಲ್ಲಿ ಗಣೇಶ್‍ಗೆ ನಾಯಕಿಯಾಗಿ ‘ಹನುಮಾನ್’ ಖ್ಯಾತಿಯ ಅಮೃತ ಅಯ್ಯರ್ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ, ಅರುಣ ಬಾಲರಾಜ್
ಮುಂತಾದವರು ನಟಿಸುತ್ತಿದ್ದಾರೆ.
ಇದನ್ನೂ ಓದಿ:-
ಹೆಚ್ಚಿನ ಓದಿಗಾಗಿ:
[…] […]
[…] […]
[…] Ramayana Rocking Star Yash ಫಸ್ಟ್ ಲುಕ್ […]
[…] Ramayana Rocking Star Yash ಫಸ್ಟ್ ಲುಕ್ […]
[…] Jungle Mangal; ಅರಣ್ಯದಲ್ಲಿ ಬಂಧಿಯಾದ Yash Shetty […]