Chandan Shetty; ಅಪ್ಪನ ಆಸೆ ಈಡೇರಿಸಿದ ಚಂದನ್ ಶೆಟ್ಟಿ; ಏನು ಆ ಆಸೆ?

ಚಂದನ್ ಶೆಟ್ಟಿ (Chandan Shetty) ಪೂರ್ಣಪ್ರಮಾಣದಲ್ಲಿ ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ‘ಸೂತ್ರಧಾರಿ’ (Suthradaari) ಇದೇ ಮೇ 09ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಮಂತ್ರಿ ಮಾಲ್‍ನಲ್ಲಿ ಬಿಡುಗಡೆಯಾಗಿದೆ.
ಈ ಚಿತ್ರದ ಮೂಲಕ ತಮ್ಮ ತಂದೆಯ ಆಸೆಯನ್ನು ಈಡೇರಿಸಿದ್ದಾರಂತೆ ಚಂದನ್ ಶೆಟ್ಟಿ. ಈ ಕುರಿತು ಮಾತನಾಡಿರುವ ಚಂದನ್, ‘ನಾನು ನಾಯಕನಾಗಬೇಕೆಂಬ ಆಸೆ ನಮ್ಮ ಅಪ್ಪನದು. ಮೇ 9ನೇ ತಾರೀಖಿನಂದು ಅವರ ಆಸೆ ಈಡೇರುತ್ತಿದೆ. ಗಾಯಕನಾಗಿ ನನ್ನನ್ನು ಎಲ್ಲರೂ ಮೆಚ್ಚಿಕೊಂಡು ಆಶೀರ್ವದಿಸಿದ್ದೀರಿ. ಈಗ ನಾಯಕನಾಗೂ ಮೆಚ್ಚಿಕೊಳ್ಳುತ್ತೀರಾ ಎಂಬ ಭರವಸೆ ಇದೆ. ಈ ಚಿತ್ರದಲ್ಲಿ ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ‘ಸೂತ್ರಧಾರಿ’ ಚಿತ್ರದ ‘ಡ್ಯಾಶ್’ ಹಾಡು ನಿರೀಕ್ಷೆಗೂ ಮೀರಿ ಜನಪ್ರಿಯವಾಗಿದೆ. ಈ ಹಾಡು ಕೂಡ ಎಲ್ಲರಿಗೂ ಪ್ರಿಯವಾಗಲಿದೆ. ಉತ್ತಮ ತಂಡದೊಂದಿಗೆ ಕೆಲಸ ಮಾಡಿದ ಖುಷಿ ಇದೆ’ ಎಂದರು ಚಂದನ್ ಶೆಟ್ಟಿ.
ವಿಜಯ್ ಈಶ್ವರ್ ಅವರು ಬರೆದಿರುವ ‘ಸೂತ್ರಧಾರಿ’ ಚಿತ್ರದ ಶೀರ್ಷಿಕೆ ಗೀತೆಯನ್ನು ನಾಯಕನಾಗಿ ನಟಿಸಿರುವ ಚಂದನ್ ಶೆಟ್ಟಿ ಹಾಡಿದ್ದಾರೆ ಜೊತೆಗೆ ಸಂಗೀತವನ್ನೂ ಸಂಯೋಜಿಸಿದ್ದಾರೆ. A2 ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಕನ್ನಡ ಸೇರಿದಂತೆ ಅನೇಕ ಭಾಷೆಗಳ 1800ಕ್ಕೂ ಅಧಿಕ ಚಿತ್ರಗಳ ಇವೆಂಟ್ ಗಳನ್ನು ಆಯೋಜಿಸಿರುವ ನವರಸನ್, ‘ಸೂತ್ರಧಾರಿ’ ಚಿತ್ರವನ್ನು ನಿರ್ಮಿಸಿದ್ದಾರೆ.

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸೂತ್ರಧಾರಿ’ ಚಿತ್ರಕ್ಕೆ ಕಿರಣ್ ಕುಮಾರ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಂದನ್ ಶೆಟ್ಟಿಗೆ ನಾಯಕಿಯಾಗಿ ಅಪೂರ್ವ ನಟಿಸಿದ್ದು, ಸಂಜನಾ ಆನಂದ್ ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ತಬಲಾ ನಾಣಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೆನ್ಸಾರ್ ಮಂಡಳಿಯು ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರವನ್ನು ನೀಡಿದೆ.
ಇದನ್ನೂ ಓದಿ:-
[…] […]
[…] […]
[…] Yuddakanda box office collection; ಗಳಿಕೆ ಗೊತ್ತಿಲ್ಲ, ಒಳ್ಳೆಯ ಪ್ರಯತ್ನ ಗೆದ್ದಿದೆ ಎಂದ ಅಜೇಯ್ ರಾವ್ […]
[…] Yuva Rajkumar Ekka; ‘ಎಕ್ಕ’ದಲ್ಲಿ ಪುನೀತ್ ಅವರನ್ನು ನೆನಪಿಸಿದ ಯುವ ರಾಜಕುಮಾರ್ […]
[…] ತುಳು ಭಾಷೆಯ ‘Daskath’, ಈಗ ಕನ್ನಡಕ್ಕೆ ಡಬ್ ಆಗಿ ಬಿಡುಗಡೆ […]
2 thoughts on “Chandan Shetty; ಅಪ್ಪನ ಆಸೆ ಈಡೇರಿಸಿದ ಚಂದನ್ ಶೆಟ್ಟಿ; ಏನು ಆ ಆಸೆ?”