ಹಾಡಿನ ಮೂಲಕ ಏನೋ ಸೂಚನೆ ಕೊಡ್ತಿದ್ದಾರೆ Manso Re 

ಮಂಸೋರೆ ತಮ್ಮ ಶೈಲಿಯ ಚಿತ್ರಗಳನ್ನು ಬಿಟ್ಟು, ಒಂದು ಪ್ರೇಮಕಥೆಯನ್ನು ನಿರ್ದೇಶಿಸುತ್ತಿರುವ ವಿಷಯ ನೆನಪಿದೆಯಲ್ವಾ? ‘ದೂರ ತೀರ ಯಾನ’(Doora Theera Yaana) ಎಂಬ ಈ ಚಿತ್ರದಲ್ಲಿ ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ನಾಯಕ-ನಾಯಕಿಯಾಗಿ ಅಭಿನಯಿಸುತ್ತಿದ್ದು, ಈ ಚಿತ್ರದ ಮೊದಲ ಹಾಡು ಎಂ.ಆರ್‍.ಟಿ ಮ್ಯೂಸಿಕ್‍ (MRT Music) ಚಾನಲ್‍ನಲ್ಲಿ ಬಿಡಗುಡೆಯಾಗಿದೆ.

ಡಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ, ಆರ್. ದೇವರಾಜ್ ನಿರ್ಮಿಸುತ್ತಿರುವ ‘ದೂರ ತೀರ ಯಾನ’ ಚಿತ್ರಕ್ಕೆ ಕವಿರಾಜ್‍ ‘ಇದೇನಿದು ಸೂಚನೆ …’ ಎಂಬ ಪ್ರೇಮಗೀತೆ ಬರೆದಿದ್ದು, ಬಕ್ಕೇಶ್-ಕಾರ್ತಿಕ್ ಸಂಗೀತ ಸಂಯೋಜಿಸಿದ್ದಾರೆ. ಅರ್ಮಾನ್‍ ಮಲಿಕ್‍ ಈ ಹಾಡಿಗೆ ಧ್ವನಿಯಾಗಿದ್ದಾರೆ.

ಈ ಸಿನೆಮಾದಲ್ಲಿ ಒಟ್ಟು ಆರು ಹಾಡುಗಳಿದ್ದು, ಬಕ್ಕೇಶ್ ಹಾಗೂ ಕಾರ್ತೀಕ್ ಹಾಡುಗಳನ್ನು ಸಂಯೋಜಿಸಿದ್ದಾರೆ. ಜಯಂತ್ ಕಾಯ್ಕಿಣಿ, ಕವಿರಾಜ್, ಪ್ರಮೋದ್ ಮರವಂತೆ ಹಾಗೂ ಕಿರಣ್ ಕಾವೇರಪ್ಪ ಸಾಹಿತ್ಯ ರಚಿಸಿದ್ದಾರೆ. ಚಿತ್ರದ ಶೀರ್ಷಿಕೆ ಗೀತೆಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವುದಾಗಿ ತಿಳಿಸಿರುವ ನಿರ್ದೇಶಕ ಮಂಸೋರೆ, ಆ ಹಾಡನ್ನು ವಿಶೇಷವಾಗಿ ಪ್ರೇಕ್ಷಕರಿಂದಲೇ ಬಿಡುಗಡೆ ಮಾಡಿಸುವ ಪ್ಲಾನ್‍ ಹಾಕಿಕೊಂಡಿದ್ದಾರೆ. ರಾಜ್ಯದ ಪ್ರಮುಖ ನಗರವೊಂದರಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದಾರೆ.

 ‘ದೂರ ತೀರ ಯಾನ’ ಚಿತ್ರಕ್ಕಾಗಿ ಬೆಂಗಳೂರು, ಉಡುಪಿ, ಕುಂದಾಪುರ, ಗೋಕರ್ಣ, ಮುರುಡೇಶ್ವರ, ಕಾರವಾರ, ಯಲ್ಲಾಪುರ, ದಾಂಡೇಲಿ, ಗೋವಾದಲ್ಲಿ 40 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು, ಸದ್ಯ ಡಬ್ಬಿಂಗ್ ಕೆಲಸಗಳು ಭರದಿಂದ ಸಾಗಿದೆ. ಜುಲೈ ತಿಂಗಳಿನಲ್ಲಿ ಚಿತ್ರ ತೆರೆಗೆ ಬರಲಿದೆ.

ಇದೊಂದು ಪ್ರೇಮಕಥೆ ಆಧರಿಸಿದ ಚಿತ್ರವಾಗಿದ್ದು, ಇಬ್ಬರು ಪ್ರೇಮಿಗಳು ಬೆಂಗಳೂರಿನಿಂದ ಗೋವಾಗೆ ಪಯಣ ಆರಂಭಿಸಿ, ಆ ಪ್ರಯಾಣದಲ್ಲಿ ತಮ್ಮ ಪ್ರೀತಿಯ ಅರ್ಥ ಕಂಡುಕೊಳ್ಳುವುದರ ಸುತ್ತ ಚಿತ್ರ ಸಾಗುತ್ತದೆ. ಮಂಸೋರೆ ಬರೆದಿರುವ ಕಥೆಗೆ ಚೇತನಾ ತೀರ್ಥಹಳ್ಳಿ ಸಂಭಾಷಣೆ ಬರೆದಿದ್ದಾರೆ.

One thought on “ಹಾಡಿನ ಮೂಲಕ ಏನೋ ಸೂಚನೆ ಕೊಡ್ತಿದ್ದಾರೆ Manso Re 

Leave a Reply

Your email address will not be published. Required fields are marked *