ನವೆಂಬರ್ 21ಕ್ಕೆ ಚಿತ್ರಮಂದಿರಗಳಲ್ಲಿ ‘Full Meals’ ಮಾಡಿ …

‘ಸಂಕಷ್ಟಕರ ಗಣಪತಿ’, ‘ಫ್ಯಾಮಿಲಿ ಪ್ಯಾಕ್’, ‘ಅಬ್ಬಬ್ಬ’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಲಿಖಿತ್ ಶೆಟ್ಟಿ ಅಭಿನಯದ ‘Full Meals’ ಚಿತ್ರವು ನವೆಂಬರ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ವಿಶೇಷವೆಂದರೆ, ಈ ಚಿತರಕ್ಕೆ ಲಿಖಿತ್ ಬರೀ ನಾಯಕನಷ್ಟೇ ಪೂರ್ಣಪ್ರಮಾಣದಲ್ಲೂ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದಿನ ಕೆಲವು ಚಿತ್ರಗಳಲ್ಲಿ ಅವರು ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದರು. ಆದರೆ, ಆ ಚಿತ್ರಗಳಿಗೆ ಪಾಲುದಾರರಾಗಿದ್ದ ಅವರು, ಈ ಚಿತ್ರವನ್ನು ಲಿಖಿತ್ ಶೆಟ್ಟಿ ಫಿಲಂಸ್ ಬ್ಯಾನರ್ ಅಡಿ ನಿರ್ಮಾಣ ಮಾಡುತ್ತಿದ್ದಾರೆ.
‘ಫುಲ್ಸ್ ಮೀಲ್ಸ್’ ಮದುವೆ ಫೋಟೋಗ್ರಾಫರ್ ಸುತ್ತ ಸುತ್ತುವ ಚಿತ್ರ. ಮದುವೆ ಫೋಟೋಗ್ರಾಫನರ್ ಒಬ್ಬನ ಜೀವನದಲ್ಲಿ ಇಬ್ಬರು ಯುವತಿಯರು ಬಂದಾಗ, ಏನೆಲ್ಲಾ ಆಗುತ್ತದೆ ಎಂಬುದನ್ನು ತಮಾಷೆಯಾಗಿ ಈ ಚಿತ್ರದಲ್ಲಿ ಹೇಳಲಾಗಿದೆ. ಇದೊಂದು ರೊಮ್ಯಾಂಟಿಕ್ ಕಾಮಿಡಿಯಾಗಿದ್ದು, ಮನರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳು ಈ ಚಿತ್ರದಲ್ಲಿದೆಯಂತೆ.
ಈಗಾಗಲೇ ಈ ಚಿತ್ರದ ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಂಪೂರ್ಣವಾಗಿ ಮುಗಿದಿದ್ದು, ಚಿತ್ರದ ಪ್ರಚಾರ ಕಾರ್ಯದ ಮೊದಲ ಹಂತವಾಗಿ, ನಾಯಕ ಲಿಖಿತ್ ಶೆಟ್ಟಿ ಹುಟ್ಟು ಹಬ್ಬದ ದಿನ ಪೋಸ್ಟರ್ ಜೊತೆ, ಸಿನೆಮಾ ಬಿಡುಗಡೆ ದಿನಾಂಕವನ್ನು ಹಂಚಿಕೊಂಡಿದ್ದಾರೆ.
ಈ ಚಿತ್ರದಲ್ಲಿ ಲಿಖಿತ್ ಶೆಟ್ಟಿಗೆ ನಾಯಕಿಯರಾಗಿ ‘ದಿಯಾ’ ಖ್ಯಾತಿಯ ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದಾರೆ. ಚಿತ್ರದುರ್ಗದ ಎನ್. ವಿನಾಯಕ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಗುರುಕಿರಣ್ ಸಂಗೀತ, ದೀಪು ಎಸ್. ಕುಮಾರ್ ಸಂಕಲನ, ಮನೋಹರ್ ಜೋಷಿ ಛಾಯಾಗ್ರಹಣ ಇರುವ ಈ ಚಿತ್ರದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಗಣೇಶ್ ರಾವ್, ಕೋಟೆ ಪ್ರಭಾಕರ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಮುಂತಾದವರು ನಟಿಸಿದ್ದಾರೆ.
ಇದನ್ನೂ ಓದಿ :-
ಹೆಚ್ಚಿನ ಓದಿಗಾಗಿ :-
Thanks for every other informative blog. The place else may just I am getting that kind of information written in…
You ought to be a part of a contest for one of the greatest blogs online. I’m going to highly…
Its like you read my mind! You appear to know so much about this, like you wrote the book in…
Обращайтесь к нам снова https://bio.site/kkediogi конспирация достойная, товар оказался отличным, кроли заценили. будем еще работать
Hi there, I discovered your web site by way of Google even as looking for a related subject, your site…
Understanding game variance is key to smart play, and platforms like OG777 seem to prioritize a strategic experience. Considering the tiered access, exploring og777 vip benefits could really enhance long-term results. It’s about informed choices, not just luck!