Kalaghatta; ಒಂದೇ ಕಥೆ, ಎರಡು ‘ಕಾಲಘಟ್ಟ’; ರಾಯರ ಸನ್ನಿಧಾನದಲ್ಲಿ ಪೋಸ್ಟರ್ ಬಿಡುಗಡೆ

ಈ ಹಿಂದೆ ‘ಖಾಲಿ ಡಬ್ಬ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದ ಪ್ರಕಾಶ್ ಅಂಬಳೆ (Prakash K Ambale), ಸದ್ದಿಲ್ಲದೆ ಹೊಸ ಚಿತ್ರವೊಂದನ್ನು ಮಾಡಿ ಮುಗಿಸಿದ್ದಾರೆ. ಈ ಚಿತ್ರಕ್ಕೆ ಅವರು ಕಾಲಘಟ್ಟ ಎಂಬ ಹೆಸರಿಟ್ಟಿದ್ದು, ಇತ್ತೀಚೆಗೆ ಮಂತ್ರಾಲಯದಲ್ಲಿ ಚಿತ್ರದ ಮೊದಲ (Mantralayam Temple) ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಂತ್ರಾಲಯದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಪೋಸ್ಟರ್ (Subudhendra Teertha Swamiji ಬಿಡುಗಡೆ ಮಾಡುವುದರ ಜೊತೆಗೆ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ನಿರ್ಮಿಸಿರುವ ‘ಕಾಲಘಟ್ಟ’ ಚಿತ್ರವು ಎರಡು ವಿಭಿನ್ನ ಕಾಲಘಟ್ಟದಲ್ಲಿ ನಡೆಯುವ ಕಥೆಯಂತೆ. ಮೊದಲಾರ್ಧ 30 ವರ್ಷಗಳ ಹಿಂದೆ ನಡೆದರೆ, ದ್ವಿತೀಯಾರ್ಧ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತದೆ. ಗ್ರಾಮೀಣ ಸೊಗಡಿನ ಜಾನಪದ ಕಲೆಯ ಬಗ್ಗೆ ಕೂಡ ಈ ಚಿತ್ರದಲ್ಲಿ ತೋರಿಸಲಾಗಿದೆ.
ಸದ್ಯ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮೈಸೂರು, ನಂಜನಗೂಡು ಹಾಗೂ ಕಳಲೆಯಲ್ಲಿ ಚಿತ್ರೀಕರಣ ನಡೆದಿದ್ದು, ಪೋಸ್ಟರ್ ಬಿಡುಗಡೆಯ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ.
ಪ್ರಕಾಶ್ ಅಂಬಳೆ ನಿರ್ದೇಶನದ ‘ಖಾಲಿ ಡಬ್ಬ’ ಇನ್ನೂ ಬಿಡುಗಡೆಯಾಗಬೇಕಿದ್ದು, ಅದಕ್ಕೂ ಮೊದಲೇ ಅವರು ‘ಕಾಲಘಟ್ಟ’ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಸದಾಶಿವ ಹಿರೇಮಠ ಹಾಗೂ ರಾಜ್ ಕಡೂರು ಅವರ ಛಾಯಾಗ್ರಹಣ, ಎ.ಎಂ.ನೀಲ್ ಸಂಗೀತ ನಿರ್ದೇಶನ, ವೆಂಕಿ ಯು.ಡಿ.ವಿ ಸಂಕಲನವಿದೆ.
ಅಭಿಲಾಶ್ ಹಾಗೂ ನಿತಿನ್, ‘ಕಾಲಘಟ್ಟ’ ದ ನಾಯಕರಾಗಿ ನಟಿಸಿದ್ದು, ಮೇಘ ಮತ್ತು ಖುಷಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ಹಿರಿಯ ಕಲಾವಿದರಾದ ಶೋಭರಾಜ್, ಭವ್ಯ, ಪ್ರಶಾಂತ್ ಹಾಗೂ ಅನೇಕ ರಂಗಭೂಮಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.

One thought on “Kalaghatta; ಒಂದೇ ಕಥೆ, ಎರಡು ‘ಕಾಲಘಟ್ಟ’; ರಾಯರ ಸನ್ನಿಧಾನದಲ್ಲಿ ಪೋಸ್ಟರ್ ಬಿಡುಗಡೆ”