250 ದಿನಗಳ ಚಿತ್ರೀಕರಣದ ನಂತರ ‘Kantara Chapter 1’ ಸಂಪೂರ್ಣ

ರಿಷಭ್ ಶೆಟ್ಟಿ (Rishabh Shetty) ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ (Kantara Chapter 1) ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಆದರೆ, ಚಿತ್ರದ ಚಿತ್ರೀಕರಣವೇ ಇನ್ನೂ ಮುಗಿದಿಲ್ಲವಾದ್ದರಿಂದ, ಚಿತ್ರವು ಅಂದುಕೊಂಡತೆಯೇ ಅಕ್ಟೋಬರ್ 02ರಂದು ಬಿಡುಗಡೆಯಾಗುತ್ತದಾ? ಎಂಬ ಪ್ರಶ್ನೆ ಸಹಜವಾಗಿಯೇ ಎಲ್ಲರಲ್ಲೂ ಇತ್ತು.
ಯಾವಾಗ ಈ ಕುರಿತು ಪ್ರಶ್ನೆಗಳು ಹೆಚ್ಚಾದವೋ? ಹೊಂಬಾಳೆ ಫಿಲಂಸ್ ಸಂಸ್ಥೆಯು ಚಿತ್ರವು ಅಂದುಕೊಂಡಂತೆಯೇ ಅಕ್ಟೋಬರ್ 02ರಂದು ಬಿಡುಗಡೆಯಾಗಲಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿತ್ತು. ಅದರ ಹೊರತಾಗಿಯೂ ಪ್ರಶ್ನೆಗಳು ನಿಲ್ಲಲಿಲ್ಲ. ಈಗ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಚಿತ್ರತಂಡವೇ ಅಧಿಕೃತವಾಗಿ ಘೋಷಿಸಿದೆ.
‘ಕಾಂತಾರ – ಚಾಪ್ಟರ್ 1’ ಚಿತ್ರದ ಚಿತ್ರೀಕರಣ ಮುಗಿದಿರುವ ಸುದ್ದಿಯನ್ನು ಹೊಂಬಾಳೆ ಫಿಲಂಸ್ ಸಂಸ್ಥೆಯು ಹೊಸ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಚಿತ್ರದ ಮೇಕಿಂಗ್ ದೃಶ್ಯಗಳ ಜೊತೆಗೆ, ಚಿತ್ರೀಕರಣ ಹೇಗಾಯಿತು ಎಂಬುದನ್ನು ತೋರಿಸಲಾಗಿದೆ. ಈ ಚಿತ್ರದಲ್ಲಿ ಸಾವಿರಾರು ಕಲಾವಿದರು ಮತ್ತು ತಂತ್ರಜ್ಞರು ಕೆಲಸ ಮಾಡಿದ್ದು, ಅವರೆಲ್ಲರಿಗೂ ಈ ವೀಡಿಯೋ ಮೂಲಕ ಥ್ಯಾಂಕ್ಸ್ ಹೇಳಿದ್ದಾರೆ ರಿಷಭ್ ಶೆಟ್ಟಿ. ಅವರೆಲ್ಲರ ಪರಿಶ್ರಮವಿಲ್ಲದಿದ್ದರೆ ಚಿತ್ರೀಕರಣ ಯಶಸ್ವಿಯಾಗಿ ಮುಗಿಯುವುದಕ್ಕೆ ಸಾಧ್ಯವಿರಲಿಲ್ಲ ಎಂದು ಸಹ ಅವರು ಹೇಳಿಕೊಂಡಿದ್ದಾರೆ.
‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ನ ವಿಜಯ್ ಕಿರಗಂದೂರು ನಿರ್ಮಿಸುತ್ತಿದ್ದು, ಚಿತ್ರದ ಚಿತ್ರೀಕರಣ ಕಳೆದ ವರ್ಷದಿಂದ ಸತತವಾಗಿ ಕುಂದಾಪುರದ ಸುತ್ತಮುತ್ತ ಭರದಿಂದ ಸಾಗುತ್ತಿದೆ. ಚಿತ್ರಕ್ಕಾಗಿ ಕುಂದಾಪುರ ಬಳಿ ದೊಡ್ಡ ಸ್ಟುಡಿಯೋ ಮಾಡಿ, ಅಲ್ಲಿ ಸೆಟ್‍ಗಳನ್ನು ಹಾಕಿ ಚಿತ್ರೀಕರಣ ಮಾಡುತ್ತಿದ್ದೇವೆ. ಈ ಚಿತ್ರಕ್ಕಾಗಿ ಕಲರಿಯಪಯಟ್ಟು ಕಲಿಯುವುದರ ಜೊತೆಗೆ 10 ಕೆಜಿ ತೂಕ ಹೆಚ್ಚಿಸಿ, ಆ ನಂತರ 8 ಕೆಜಿ ತೂಕ ಇಳಿಸಿದ್ದಾರಂತೆ. ಒಟ್ಟಾರೆ 250ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರಕ್ಕೆ ಚಿತ್ರೀಕರಣವಾಗಿರುವುದು ವಿಶೇಷ.
‘ಕಾಂತಾರ – ಚಾಪ್ಟರ್ 1’ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರಕ್ಕೆ ಅರವಿಂದ್ ಕಶ್ಯಪ್ ಛಾಯಾಗ್ರಹಣ ಮತ್ತು ಅಜನೀಶ್ ಲೋಕನಾಥ್ ಸಂಗೀತವಿದೆ. ಎಸ್.ಎಸ್. ರಾಜಮೌಳಿ ನಿರ್ದೇಶನನದ ‘RRR’ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದ ಬಲ್ಗೇರಿಯಾ ಮೂಲದ ಟೊಡರ್ ಲ್ಯಾಜರೋವ್, ‘ಕಾಂತಾರ’ ಚಿತ್ರಕ್ಕೂ ಸಾಹಸ ನಿರ್ದೇಶನ ಮಾಡಿದ್ದಾರೆ.
ಚಿತ್ರದಲ್ಲಿ ರಿಷಭ್ ಶೆಟ್ಟಿ, ಅಚ್ಯುತ್ ಕುಮಾರ್ ಮುಂತಾದವರು ನಟಿಸಿದ್ದಾರೆ.
ಇದನ್ನೂ ಓದಿ:-
ಹೆಚ್ಚಿನ ಓದಿಗಾಗಿ :-
[…] […]
[…] ಹಳೆಯ ‘ರಾಜದ್ರೋಹಿ’ ಹೊಸ ರೂಪದಲ್ಲಿ ಬಿಡುಗಡೆಗೆ ಸಜ್ಜು … […]
[…] […]
[…] 250 ದಿನಗಳ ಚಿತ್ರೀಕರಣದ ನಂತರ ‘Kantara Chapter 1’ ಸಂಪೂರ್ಣ […]
It is a pity, that I can not participate in discussion now. I do not own the necessary information. But…
One thought on “250 ದಿನಗಳ ಚಿತ್ರೀಕರಣದ ನಂತರ ‘Kantara Chapter 1’ ಸಂಪೂರ್ಣ”