Mankuthimmana Kagga; ಹಾಡಾಯ್ತು, ಈಗ ‘ಮಂಕುತಿಮ್ಮನ ಕಗ್ಗ’ ಚಿತ್ರದಿಂದ ಟ್ರೇಲರ್  ಬಂತು


ಕಳೆದ ವರ್ಷ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ‘ಮಂಕುತಿಮ್ಮನ ಕಗ್ಗ’ (Mankuthimmana Kagga) ಚಿತ್ರದ ಒಂದು ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಲಾಗಿತ್ತು. ಹಲವು ವರ್ಷಗಳ ಹಿಂದೆ ಸೋಸಲೆ ಅಯ್ಯ ಶಾಸ್ತ್ರಿಗಳು ಬರೆದಿದ್ದ ‘ಸ್ವಾಮಿ ದೇವನೆ ಲೋಕ ಪಾಲನೆ …’ ಹಾಡನ್ನು ಈ ಚಿತ್ರಕ್ಕಾಗಿ ಬಳಸಿಕೊಳ್ಳಲಾಗಿದ್ದು, ಆ ಹಾಡನ್ನು ಬಿಡುಗಡೆ ಮಾಡಲಾಗಿತ್ತು.

ಇದೀಗ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಮೇ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ. ಅದಕ್ಕೂ ಮೊದಲು ಇತ್ತೀಚಚೆಗೆ ಟ್ರೇಲರ್‌ ಬಿಡುಗಡೆಯಾಗಿದೆ.

ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ ಅದು ‘ಮಂಕುತಿಮ್ಮನ ಕಗ್ಗ’. ಇದು ಡಿ.ವಿ.ಜಿ ಅವರ ಬಾಲ್ಯದ ದಿನಗಳ ಕುರಿತಾದ ಚಿತ್ರ. ರಾಜ ರವಿಶಂಕರ್‍ ಈ ಚಿತ್ರವನ್ನು ನಿರ್ದೇಶಿಸಿದ್ದು, ಎನ್.ಎ. ಶಿವಕುಮಾರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ಈ ಚಿತ್ರದ ಕುರಿತು ಮಾತನಾಡುವ ರವಿಶಂಕರ್‍, ‘ಈ ಚಿತ್ರದಲ್ಲಿ‌‌ ಡಿ.ವಿ.ಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ.‌ ಬಾಲ್ಯದಲ್ಲಿ ಡಿ.ವಿ.ಜಿ ಅವರ ಮೇಲೆ ಅತ್ಯಂತ ಪ್ರಭಾವ ಬೀರಿದ್ದು ಅವರ ಸೋದರಮಾವ ತಿಮ್ಮಣ್ಣ ಮೇಷ್ಟ್ರು. ಸೋದರಮಾವ ಹಾಗೂ ಸೋದರಳಿಯನ ಬಾಂಧವ್ಯವನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ಚಿತ್ರವನ್ನು ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡುವ ಯೋಚನೆ ಇದೆ’ ಎಂದರು.

ಶಿವಕುಮಾರ್, ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಪ್ರಸಾಧನ ಕಲಾವಿದರಾಗಿ ಗುರುತಿಸಿಕೊಂಡವರು. ಇದು ಅವರ ನಿರ್ಮಾಣದ ಎರಡನೆಯ ಚಿತ್ರ. ‘ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿದ್ದೇನೆ. 20 ವರ್ಷಗಳ ಹಿಂದೆ ‘ಅವಳೆ ನನ್ನ ಗೆಳತಿ’ ಚಿತ್ರ ನಿರ್ಮಾಣ ಮಾಡಿದ್ದೆ. ಡಿ.ವಿ.ಜಿ ಅವರ ಚಿತ್ರ ಮಾಡಿರುವುದಕ್ಕೆ ಹೆಮ್ಮೆ ಇದೆ’ ಎಂದು ನಿರ್ಮಾಪಕ ಶಿವಕುಮಾರ್ ತಿಳಿಸಿದರು.

ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಸೋಮಿ (ಡಿ.ವಿ.ಜಿ) ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ. ಮಿಕ್ಕಂತೆ ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.  ಚಿತ್ರಕ್ಕೆ ಎ.ಟಿ. ರವೀಶ್‍ ಸಂಗೀತ ಸಂಯೋಜಿಸಿದ್ದಾರೆ.


  1. […] Yuddakanda box office collection; ಗಳಿಕೆ ಗೊತ್ತಿಲ್ಲ, ಒಳ್ಳೆಯ ಪ್ರಯತ್ನ ಗೆದ್ದಿದೆ ಎಂದ ಅಜೇಯ್‍ ರಾವ್‍ […]

  2. […] Yuva Rajkumar Ekka; ‘ಎಕ್ಕ’ದಲ್ಲಿ ಪುನೀತ್‍ ಅವರನ್ನು ನೆನಪಿಸಿದ ಯುವ ರಾಜಕುಮಾರ್ […]

  3. […] ತುಳು ಭಾಷೆಯ ‘Daskath’, ಈಗ ಕನ್ನಡಕ್ಕೆ ಡಬ್‍ ಆಗಿ ಬಿಡುಗಡೆ […]

One thought on “Mankuthimmana Kagga; ಹಾಡಾಯ್ತು, ಈಗ ‘ಮಂಕುತಿಮ್ಮನ ಕಗ್ಗ’ ಚಿತ್ರದಿಂದ ಟ್ರೇಲರ್  ಬಂತು

Leave a Reply

Your email address will not be published. Required fields are marked *