Shivaraj Kumar ಹೊಸ ಚಿತ್ರ ‘ಡ್ಯಾಡ್‍’; ಡಾಕ್ಟರ್ ಪಾತ್ರದಲ್ಲಿ ನಟನೆ

ಭೈರತಿ ರಣಗಲ್‍’, ‘ಘೋಸ್ಟ್’ ಮುಂತಾದ ಚಿತ್ರಗಳಲ್ಲಿ ಗ್ಯಾಂಗ್‍ಸ್ಟರ್ ಪಾತ್ರಗಳಲ್ಲೇ ಕಾಣಿಸಿಕೊಂಡಿದ್ದ Shivaraj Kumar, ಒಂದು ಗ್ಯಾಪ್‍ನ ನಂತರ ಒಂದು ಸಾಫ್ಟ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ‘ಡ್ಯಾಡ್‍’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಮುಹೂರ್ತ ಮೈಸೂರಿನಲ್ಲಿ ನಡೆದಿದ್ದು, ಚಿತ್ರೀಕರಣ ಭರದಿಂದ ಸಾಗಿದೆ.

ಇದೊಂದು ತಂದೆ ಸೆಂಟಿಮೆಂಟ್‍ ಚಿತ್ರವಾಗಿದ್ದು, ಸಾಕಷ್ಟು ಥ್ರಿಲ್ಲಿಂಗ್‍ ಅಂಶಗಳು ಇರಲಿವೆಯಂತೆ. ಶಿವರಾಜ್‍ಕುಮಾರ್ ಈ ಚಿತ್ರದಲ್ಲಿ ವೈದ್ಯನ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ‘ಗಡಿಬಿಡಿ ಕೃಷ್ಣ’ ಚಿತ್ರದಲ್ಲಿ ವೈದ್ಯರಾಗಿ ಕಾಣಿಸಿಕೊಂಡಿದ್ದ ಶಿವರಾಜ್‍ಕುಮಾರ್, ಸುಮಾರು 27 ವರ್ಷಗಳ ನಂತರ ಪುನಃ ಈ ಚಿತ್ರದಲ್ಲಿ ವೈದ್ಯರಾಗಿ ಅಭಿನಯಿಸುತ್ತಿದ್ದಾರೆ.

ಈ ಚಿತ್ರವನ್ನು ಹರೀಶ್‍ ಪೆದ್ದಿ, ಮೈರಾ ಕ್ರಿಯೇಷನ್ಸ್ ಲಾಂಛನದಡಿ ನಿರ್ಮಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರು ತೆಲುಗಿನಲ್ಲಿ ‘ಭಗವಂತ್‍ ಕೇಸರಿ’, ‘ಉಗ್ರಂ’, ‘ಟಕ್‍ ಜಗದೀಶ್‍’ ಮುಂತಾದ ತೆಲುಗು ಚಿತ್ರಗಳನ್ನು ನಿರ್ಮಿಸಿದ್ದರು. ಇನ್ನು, ತೆಲುಗಿನಲ್ಲಿ ‘ಅಸಾಧ್ಯುಡು’, ‘ಮಿಸ್ಟರ್‍ ನೂಕಯ್ಯ’ ಮತ್ತು ‘ಹಿಡಿಂಬ’ ಚಿತ್ರಗಳನ್ನು ನಿರ್ದೇಶಿಸಿರುವ ಅನಿಲ್‍ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಸುಮಾರು ಮೂರು ವರ್ಷಗಳ ಹಿಂದೆಯೇ ಅವರು ಈ ಕಥೆಯನ್ನು ಶಿವರಾಜಕುಮಾರ್ ಅವರಿಗೆ ಹೇಳಿದ್ದು, ಶಿವರಾಜಕುಮಾರ್ ಸಹ ಕಥೆ ಕೇಳಿ ಮೆಚ್ಚಿಕೊಂಡಿದ್ದರಂತೆ. ಆದರೆ, ಸೂಕ್ತ ನಿರ್ಮಾಪಕರು ಸಿಗದ ಕಾರಣ, ಚಿತ್ರ ಪ್ರಾರಂಭವಾಗಿರಲಿಲ್ಲ. ಇದೀಗ ಹರೀಶ್‍ ಪೆದ್ದಿ ಚಿತ್ರವನ್ನು ನಿರ್ಮಿಸಲು ಮುಂದೆ ಬಂದಿದ್ದು, ಚಿತ್ರೀಕರಣ ಪ್ರಾರಂಭವಾಗಿದೆ. ‘ಡ್ಯಾಡ್‍’ ಚಿತ್ರಕ್ಕಾಗಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಸುಮಾರು 50 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.

‘ಡ್ಯಾಡ್‍’ ಚಿತ್ರದಲ್ಲಿ ಶಿವರಾಜ್‍ಕುಮಾರ್ ಜೊತೆಗೆ Sharmiela Mandre, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್‍ ವೆಂಜರಮೂಡು ಮುಂತಾದವರು ನಟಿಸುತ್ತಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ Arjun Janya ಸಂಗೀತವಿದೆ. ಬಿ. ರಾಜಶೇಖರ್‍ ಈ ಚಿತ್ರದ ಛಾಯಗ್ರಾಹಕರು.


ಇದನ್ನೂ ಓದಿ :-


ಹೆಚ್ಚಿನ ಓದಿಗಾಗಿ :-

  1. Покуреха порошки безвкусные (на язык), остальные горькие. Так проще всего определить. https://www.band.us/page/99926443/ уже ожидается что нибудь?


One thought on “Shivaraj Kumar ಹೊಸ ಚಿತ್ರ ‘ಡ್ಯಾಡ್‍’; ಡಾಕ್ಟರ್ ಪಾತ್ರದಲ್ಲಿ ನಟನೆ

  1. Interesting analysis! Seeing a lot of potential in these matchups. Quick, secure access is key – exploring options like the kkkjili app for seamless betting could be a game-changer. Definitely a platform to watch for Filipino gamers!

Leave a Reply

Your email address will not be published. Required fields are marked *

ಪುನಃ ಪುನಃ ನೋಡಿದರು,,,,ಎಂದ ಹಾಗೆ ವಿಭಿನ್ನ Lookನಲ್ಲಿ ರಮೇಶ್‌ ಅರವಿಂದ್‌ ಶಿವರಾಜ್‍ಕುಮಾರ್ ಹೊಸ ಚಿತ್ರ ‘ಡ್ಯಾಡ್‍’; ಡಾಕ್ಟರ್ ಪಾತ್ರದಲ್ಲಿ ನಟನೆ ಸುಳ್ಳು ಸುದ್ದಿ ನಿಜವಾಗುವ ಕಾಲ ಬಂದೇ ಬಡ್ತಾ..! ಯುವ ರಾಜ್‌ಕುಮಾರ್‌ ಜೊತೆ ಎಕ್ಕದಲ್ಲಿ ಸಂಜನಾ ಆನಂದ್‌ ರಾಧಿಕಾ ನಾರಾಯಣ್ ಅಭಿನಯಿಸಿದ ಕನ್ನಡ ಚಲನಚಿತ್ರ “ರಂಗಿತರಂಗ” ಮತ್ತೆ ಬೆಳ್ಳಿತೆರೆಗೆ