Nenapirali Prem; ನಿರಂಜನ್ ಜೊತೆಗೆ ‘ಸ್ಪಾರ್ಕ್’ ಹೊತ್ತಿಸಲು ಬರುತ್ತಿದ್ದಾರೆ ‘ನೆನಪಿರಲಿ’ ಪ್ರೇಮ್

‘ನೆನಪಿರಲಿ’ ಪ್ರೇಮ್ (Nenapirali Prem) ಇತ್ತೀಚಿನ ವರ್ಷಗಳಲ್ಲಿ ಬಹಳ ಚ್ಯೂಸಿಯಾಗಿದ್ದಾರೆ. ಬಂದ ಅವಕಾಶಗಳನ್ನೆಲ್ಲಾ ಅವರು ಒಪ್ಪಿಕೊಳ್ಳದೆ, ಮನಸ್ಸಿಗೆ ಹತ್ತಿರವಾಗುವ ಕಥೆ ಮತ್ತು ಪಾತ್ರಗಳನ್ನು ಮಾತ್ರ ಒಪ್ಪಿಕೊಳ್ಳುತ್ತಿದ್ದಾರೆ. ‘ಪ್ರೇಮಂ ಪೂಜ್ಯಂ’ ಚಿತ್ರದ ನಂತರ ಅವರು, ಕಳೆದ ವರ್ಷ ಬಿಡುಗಡೆಯಾದ ‘ಅಪ್ಪಾ ಐ ಲವ್ ಯೂ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಸದ್ದಿಲ್ಲದೆ ಇನ್ನೊಂದು ಚಿತ್ರದ ಭಾಗವಾಗಿದ್ದಾರೆ.
ಪ್ರೇಮ್ ಹುಟ್ಟುಹಬ್ಬ ಸಂದರ್ಭದಲ್ಲಿ ಅವರ ಹೊಸ ಚಿತ್ರದ ಘೋಷಣೆಯಾಗಿದೆ. ಘೋಷಣೆ ಆಗಿದೆ ಎನ್ನುವುದಕ್ಕಿಂತ ಚಿತ್ರದ ಘೋಷಣೆ, ಮುಹೂರ್ತ ಎರಡೂ ಮೊದಲೇ ಆಗಿತ್ತು. ಈಗ ಚಿತ್ರತಂಡಕ್ಕೆ ಪ್ರೇಮ್ ಸೇರ್ಪಡೆಯಾಗಿದ್ದಾರೆ. ಈ ಚಿತ್ರದಲ್ಲಿ ಪ್ರೇಮ್ ವಿಶೇಷವಾದ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.
ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅಭಿನಯದಲ್ಲಿ ‘ಸ್ಪಾರ್ಕ್’ (spark ) ಎಂಬ ಹೊಸ ಚಿತ್ರ ಕೆಲವು ತಿಂಗಳುಗಳ ಹಿಂದೆ ಸೆಟ್ಟೇರಿದ್ದು ನೆನಪಿರಬಹುದು. ಇದೀಗ ಆ ಚಿತ್ರದಲ್ಲಿ ಪ್ರೇಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ಆಕ್ಷನ್-ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಹಾಂತೇಶ್ ಹಂದ್ರಾಳ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಸಹ ಅವರದ್ದೇ. ಚಿತ್ರದಲ್ಲಿ ನಿರಂಜನ್ ಸುಧೀಂದ್ರ ಪತ್ರಕರ್ತನಾಗಿ ನಟಿಸತ್ತಿದ್ದು, ಅವರಿಗೆ ನಾಯಕಿಯಾಗಿ ರಚನಾ ಇಂದರ್ ಇದ್ದಾರೆ. ಈ ಚಿತ್ರದಲ್ಲಿ ಪ್ರೇಮ್ ಪಾತ್ರವೇನು? ಎಂಬ ಪ್ರಶ್ನೆ ಸಹಜ. ಪ್ರೇಮ್ ಈ ಚಿತ್ರದಲ್ಲಿ ಒಂದು ವಿಶಿಷ್ಟ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಹಿಂದೆಂದೂ ಕಾಣದ ಲುಕ್‍ನಲ್ಲಿ ಪ್ರೇಮ್ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
‘ಸ್ಪಾರ್ಕ್’ ಚಿತ್ರವನ್ನು ಡಾ. ಗರಿಮಾ ಅವಿನಾಶ್ ವಸಿಷ್ಠ ನಿರ್ಮಿಸುತ್ತಿದ್ದಾರೆ. ಅಶ್ವಿನ್ ಕೆನಡಿ ಛಾಯಾಗ್ರಹಣ, ಸಚಿನ್ ಬಸ್ರೂರು ಸಂಗೀತ ಈ ಚಿತ್ರಕ್ಕಿದ್ದು, ಚಿತ್ರೀಕರಣ ಭರದಿಂದ ಸಾಗಿದೆ.


ಇದಲ್ಲದೆ ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜನಿ ರಾಘವನ್ ನಿರ್ದೇಶನದ ಹೊಸ ಚಿತ್ರದಲ್ಲೂ ಪ್ರೇಮ್ ಒಂದು ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಸುದ್ದಿ ಇದೆ. ಈ ಚಿತ್ರದ ಶೀರ್ಷಿಕೆ ಅನಾವರಣ ಶುಕ್ರವಾರ ಸಂಜೆ ನಡೆಯಲಿದೆ.
ಇದನ್ನೂ ಓದಿ:-
ಹೆಚ್ಚಿನ ಓದಿಗೆ:-
[…] […]
[…] […]
[…] Yuddakanda box office collection; ಗಳಿಕೆ ಗೊತ್ತಿಲ್ಲ, ಒಳ್ಳೆಯ ಪ್ರಯತ್ನ ಗೆದ್ದಿದೆ ಎಂದ ಅಜೇಯ್ ರಾವ್ […]
[…] Yuva Rajkumar Ekka; ‘ಎಕ್ಕ’ದಲ್ಲಿ ಪುನೀತ್ ಅವರನ್ನು ನೆನಪಿಸಿದ ಯುವ ರಾಜಕುಮಾರ್ […]
[…] ತುಳು ಭಾಷೆಯ ‘Daskath’, ಈಗ ಕನ್ನಡಕ್ಕೆ ಡಬ್ ಆಗಿ ಬಿಡುಗಡೆ […]
2 thoughts on “Nenapirali Prem; ನಿರಂಜನ್ ಜೊತೆಗೆ ‘ಸ್ಪಾರ್ಕ್’ ಹೊತ್ತಿಸಲು ಬರುತ್ತಿದ್ದಾರೆ ‘ನೆನಪಿರಲಿ’ ಪ್ರೇಮ್”