Game Changer Ram Charan

Game Changer; ತೆಲುಗಿನ ‘ಗೇಮ್‍ ಚೇಂಜರ್’ನಿಂದ ಕನ್ನಡ ಚಿತ್ರಗಳಿಗೆ ಚಿತ್ರಮಂದಿರ ಸಿಗುತ್ತಿಲ್ಲ

ದೊಡ್ಡ ಬಜೆಟ್‍ನ ಮತ್ತು ಬಹುನಿರೀಕ್ಷೆಯ ಪರಭಾಷಾ ಚಿತ್ರಗಳು ರಾಜ್ಯದಲ್ಲಿ ಬಿಡುಗಡೆ ಆದಾಗಲೆಲ್ಲಾ, ಕನ್ನಡ ಚಿತ್ರಗಳಿಗೆ ಸಮಸ್ಯೆ ಎದುರಾಗುತ್ತದೆ. ಇದೀಗ ರಾಮ್‍ಚರಣ್‍ ತೇಜ ಅಭಿನಯದ ‘ಗೇಮ್‍ ಚೇಂಜರ್‍’ ಚಿತ್ರದಿಂದ ತಮಗೆ ಚಿತ್ರಮಂದಿರಗಳು ಸಿಗುತ್ತಿಲ್ಲ ಎಂದು ‘ಛೂ ಮಂತರ್’ ನಿರ್ಮಾಪಕ ತರುಣ್ ಶಿವಪ್ಪ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಇಂದು ಶರಣ್‍ ಅಭಿನಯದ ‘ಛೂ ಮಂತರ್’, ‘ಟೆಡ್ಡಿ ಬೇರ್‍’ ಮತ್ತು ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಚಿತ್ರಗಳು ಬಿಡುಗಡೆಯಾಗುತ್ತಿವೆ. ಇದರ ಜೊತೆಗೆ ತೆಲುಗಿನ ನಿರೀಕ್ಷಿತ ಚಿತ್ರವಾದ ರಾಮ್‍ಚರಣ್‍…

Read More
Manada Kadalu turra Song

ಹುಚ್ಚನಿಂದ ಸ್ಫೂರ್ತಿ ಪಡೆದು ‘ತುರ್ರಾ’ ಹಾಡು ಬರೆದ ಯೋಗರಾಜ್ ಭಟ್

‘ಮನದ ಕಡಲು’ ಚಿತ್ರಕ್ಕೆ ಸಂಬಂಧಿಸಿದಂತೆ ವಾರಕ್ಕೊಂದು ಪತ್ರಿಕಾಗೋಷ್ಠಿ ಮಾಡುತ್ತಿದ್ದಾರೆ ನಿರ್ದೇಶಕ ಯೋಗರಾಜ್‍ ಭಟ್‍. ಮೊದಲು ಚಿತ್ರದ ಮೊದಲ ನೋಟ ಬಿಡುಗಡೆಯಾಯಿತು. ಆ ನಂತರ ‘ಹೂ ದುಂಬಿಯ ಕಥೆಯ’ ಎಂಬ ಹಾಡನ್ನು ಅವರು ಬಿಡುಗಡೆ ಮಾಡಿದರು. ಈಗ ಚಿತ್ರದ ಎರಡನೇ ಹಾಡನ್ನು ಇದೀಗ ಬಿಡುಗಡೆ ಮಾಡಲಾಗಿದೆ. ‘ತುರ್ರಾ’ ಎಂಬ ಈ ಹಾಡನ್ನು ಯೋಗರಾಜ್ ಭಟ್ ಬರೆದಿದ್ದು, ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ವಿ. ಹರಿಕೃಷ್ಣ, ಸಂಜಿತ್ ಹಗ್ಡೆ ಹಾಗೂ ಪ್ರಾರ್ಥನಾ ಈ ಹಾಡನ್ನು ಹಾಡಿದ್ದಾರೆ. ನೆಲಮಂಗಲದ ಬಳಿಯಿರುವ…

Read More
Sathish Ninasam The Rise of Ashoka

The Rise of Ashoka; ‘ಅಶೋಕ ಬ್ಲೇಡ್‍’ ಈಗ ‘ದಿ ರೈಸ್ ಆಫ್ ಅಶೋಕ’; ಸದ್ಯದಲ್ಲೇ ಚಿತ್ರೀಕರಣ

ಸತೀಶ್ ನೀನಾಸಂ ಅಭಿನಯದಲ್ಲಿ ಎರಡೂವರೆ ವರ್ಷಗಳ ಹಿಂದೆ ‘ಅಶೋಕ ಬ್ಲೇಡ್‍’ ಚಿತ್ರ ಪ್ರಾರಂಭವಾಗಿದ್ದು ನೆನಪಿರಬಹುದು. ಚಿತ್ರದ ಚಿತ್ರೀಕರಣ ಸಹ ಬಹುತೇಕ ಮುಗಿದಿತ್ತು. ಆದರೆ, ಆ ಚಿತ್ರದ ಬಜೆಟ್‍ ಹೆಚ್ಚಾದ್ದರಿಂದ ನಿರ್ದೇಶಕ ಮತ್ತು ನಿರ್ಮಾಪಕರಲ್ಲೊಬ್ಬರಾದ ವಿನೋದ್‍ ಧೋಂಡಾಳೆ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡರು. ಇನ್ನು, ಚಿತ್ರ ಪ್ರಾರಂಭವಾಗುವುದಿಲ್ಲ ಎಂಬ ಮಾತುಗಳು ಹರಿದಾಡುತ್ತಿರುವಾಗಲೇ ಚಿತ್ರ ಪುನಃ ಶುರುವಾಗುತ್ತಿರುವ ಸುದ್ದಿ ಇದೆ. ‘ಅಶೋಕ ಬ್ಲೇಡ್‍’ ಚಿತ್ರಕ್ಕೆ ‘ದಿ ರೈಸ್ ಆಫ್ ಅಶೋಕ’ ಎಂಬ ಹೆಸರನ್ನು ಇಡಲಾಗಿದ್ದು, ಈ ಶೀರ್ಷಿಕೆಯಲ್ಲೇ ಚಿತ್ರ ಬಿಡುಗಡೆಯಾಗಲಿದೆ….

Read More
Sanju Weds Geetha 2

ಮುಂದಕ್ಕೆ ಹೋಯ್ತು ‘ಸಂಜು ವೆಡ್ಸ್ ಗೀತಾ 2’; ಈ ವಾರ ಬಿಡುಗಡೆ ಇಲ್ಲ

ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್‍ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಬಿಡುಗಡೆ ಅನಿವಾರ್ಯ ಕಾರಣಗಳಿಂದ ಮುಂದಕ್ಕೆ ಹೋಗಿದೆ. ಚಿತ್ರದ ಹೊಸ ಬಿಡುಗಡೆ ದಿನಾಂಕ ಇನ್ನಷ್ಟೇ ಘೋಷಣೆಯಾಗಬೇಕಿದ್ದು, ಸದ್ಯದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಎರಡು ದಿನಗಳ ಹಿಂದೆಯೇ ಚಿತ್ರದ ಬಿಡುಗಡೆ ಅನುಮಾನ ಎಂಬ ಸುದ್ದಿಯೂ ಕೇಳಿಬಂದಿತ್ತು. ಅದಕ್ಕೆ ಕಾರಣ, ಸ್ಟೇ ಆರ್ಡರ್‍ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ನಿರ್ಮಾಪಕರು ಫೈನಾನ್ಶಿಯರ್‌ಗಳ…

Read More