ಯಶ್‍ ನಟನೆಯ ‘ಟಾಕ್ಸಿಕ್’ ಚಿತ್ರದಲ್ಲಿ ರುಕ್ಮಿಣಿ ವಸಂತ್‍?

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರದ ಚಿತ್ರೀಕರಣ ಕಳೆದ ಕೆಲವು ತಿಂಗಳುಗಳಿಂದ ಭರದಿಂದ ಸಾಗಿದೆ. ಇದೀಗ ಚಿತ್ರದ ಕುರಿತು ಇನ್ನೊಂದು ಸುದ್ದಿ ಬಂದಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಮೂಲಕ ದೊಡ್ಡ ಹೆಸರು ಮಾಡಿದ ರುಕ್ಮಿಣಿ ವಸಂತ್‍, ಈ ಚಿತ್ರದಲ್ಲೊಂದು ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿದ್ದಾರಂತೆ.

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರದಲ್ಲಿ ರುಕ್ಮಿಣಿ ವಸಂತ್‍ ನಟಿಸುತ್ತಿದ್ದಾರೆ ಎಂಬ ಸುದ್ದಿ ಕಳೆದ ವರ್ಷ ಕೇಳಿಬಂದಿತ್ತು. ಆ ಸುದ್ದಿ ಇತ್ತೀಚೆಗೆ ನಿಜವಾಗಿದೆ. ಸ್ವತಃ ಚಿತ್ರತಂಡದವರೇ, ಚಿತ್ರದಲ್ಲಿ ರುಕ್ಮಿಣಿ ವಸಂತ್‍ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಘೋಷಣೆಯಾಗಿದೆ.

ಹೀಗಿರುವಾಗಲೇ, ‘ಟಾಕ್ಸಿಕ್‍’ ಚಿತ್ರದಲ್ಲಿ ರುಕ್ಮಿಣಿ ವಸಂತ್‍ ನಟಿಸುತ್ತಿರುವ ಸುದ್ದಿಯೊಂದು ಬಂದಿದೆ. ಈಗಾಗಲೇ ಅವರು ಒಂದೆರಡು ಹಂತಗಳ ಚಿತ್ರೀಕರಣದಲ್ಲೂ ಭಾಗವಹಿಸಿದ್ದಾರಂತೆ. ಆದರೆ, ಚಿತ್ರತಂಡದಿಂದ ಮಾತ್ರ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಬಹುಶಃ ಮುಂದೊಂದು ದಿನ ‘ಟಾಕ್ಸಿಕ್‍’ ಚಿತ್ರದಲ್ಲಿ ರುಕ್ಮಿಣಿ ವಸಂತ್‍ ನಟಿಸುತ್ತಿರುವ ಸುದ್ದಿಯೂ ಹೊರಬರಬಹುದು.

‘ಟಾಕ್ಸಿಕ್‍’ ಚಿತ್ರವು ಕಳೆದ ವರ್ಷದ ಆರಂಭದಲ್ಲಿ ಘೋಷಣೆಯಾಗಿತ್ತು. ಘೋಷಣೆಯ ದಿನವೇ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿತ್ತು. ಅದರ ಪ್ರಕಾರ, ಚಿತ್ರವು 2025ರ ಏಪ್ರಿಲ್‍ 10ರಂದು ಜಗತ್ತಿನಾದ್ಯಂತ ಬಿಡುಗಡೆ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರವು ತಡವಾಗಿ, ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಇದೀಗ 2026ರ ಮಾರ್ಚ್ 19ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

‘ಟಾಕ್ಸಿಕ್‍’ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತೂ ಮೋಹನ್‍ ದಾಸ್‍ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಯಶ್‍, ಕಿಯಾರಾ ಅಡ್ವಾಣಿ, ನಯನತಾರಾ, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್‍, ಅನಿಲ್‍ ಕಪೂರ್, ಹಾಲಿವುಡ್‍ ನಟ ಕೈಲ್‍ ಪಾಲ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರವನ್ನು ಏಕಕಾಲಕ್ಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಚಿತ್ರೀಕರಿಸಲಾಗುತ್ತಿದ್ದು, ಬಳಿಕ ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಅಂತಾರಾಷ್ಟ್ರೀಯ ಭಾಷೆಗಳಲ್ಲಿ ಡಬ್ ಮಾಡಲಾಗುತ್ತದೆ.

53 thoughts on “ಯಶ್‍ ನಟನೆಯ ‘ಟಾಕ್ಸಿಕ್’ ಚಿತ್ರದಲ್ಲಿ ರುಕ್ಮಿಣಿ ವಸಂತ್‍?

Leave a Reply

Your email address will not be published. Required fields are marked *

ಸೀರೆಯಲ್ಲಿ ಫೋಟೊ ಶೂಟ್‌ ತೆಗಿಸಿಕೊಂಡ ಕಾಂತಾರ ಸುಂದರಿ ಸಪ್ತಮಿಗೌಡ Bigg Boss 11 Sangeetha Sringeri in a cute look ಪುನಃ ಪುನಃ ನೋಡಿದರು,,,,ಎಂದ ಹಾಗೆ ವಿಭಿನ್ನ Lookನಲ್ಲಿ ರಮೇಶ್‌ ಅರವಿಂದ್‌ ಶಿವರಾಜ್‍ಕುಮಾರ್ ಹೊಸ ಚಿತ್ರ ‘ಡ್ಯಾಡ್‍’; ಡಾಕ್ಟರ್ ಪಾತ್ರದಲ್ಲಿ ನಟನೆ ಸುಳ್ಳು ಸುದ್ದಿ ನಿಜವಾಗುವ ಕಾಲ ಬಂದೇ ಬಡ್ತಾ..!