‘Kantara ಅಧ್ಯಾಯ 1’ ಚಿತ್ರಕ್ಕೆ Rukmini Vasanth ನಾಯಕಿ?
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘Kantara ಅಧ್ಯಾಯ 1’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿವೆ. ಈ ಮಧ್ಯೆ, ಚಿತ್ರತಂಡವು ಚಿತ್ರೀಕರಣ ಮುಗಿದ ಖುಷಿಯಲ್ಲಿ ಒಂದು ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಿ, ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರಿಗೆ ಧನ್ಯವಾದ ತಿಳಿಸಿದೆ.
ಈ ಮಧ್ಯೆ, ಚಿತ್ರದಲ್ಲಿ ಯಾರೆಲ್ಲಾ ನಟಿಸಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಇತ್ತೀಚೆಗೆ ಮಾಧ್ಯಮದವರ ಹತ್ತಿರ ಮಾತನಾಡುವ ಸಂದರ್ಭದಲ್ಲಿ, ಚಿತ್ರದಲ್ಲಿ ನಟಿಸಿರುವುದಾಗಿ ಅಚ್ಯುತ್ ಕುಮಾರ್ ಹೇಳಿದ್ದರು. ಅವರು ‘ಕಾಂತಾರ’ ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈಗ ಈ ಚಿತ್ರದಲ್ಲೂ ಕಾಣಿಸಿಕೊಂಡಿದ್ದಾರಂತೆ. ಮಿಕ್ಕಂತೆ ಯಾರೆಲ್ಲಾ ನಟಿಸಿದ್ದಾರೆ ಎಂದು ಚಿತ್ರತಂಡದವರು ಎಲ್ಲೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಹೀಗಿರುವಾಗಲೇ, ರುಕ್ಮಿಣಿ ವಸಂತ್ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ ಎಂಬ ಸುದ್ದಿಯೊಂದು ಕೇಳಿಬಂದಿದೆ.
ರುಕ್ಮಿಣಿ, ‘ಕಾಂತಾರ – ಚಾಪ್ಟರ್ 1’ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕಳೆದ ವರ್ಷವೇ ಕೇಳಿಬಂದಿತ್ತು. ಆದರೆ, ಈ ಕುರಿತು ಅವರಾಗಲೀ, ಚಿತ್ರತಂಡದವರಾಗಲೀ ಖಚಿತಪಡಿಸಿಲ್ಲ. ಹೀಗಿರುವಾಗಲೇ ‘ಕಾಂತಾರ – ಚಾಪ್ಟರ್ 1’ ಚಿತ್ರಕ್ಕೆ ಅವರು ನಾಯಕಿಯಾಗಿದ್ದಾರೆ ಎಂಬ ಮಾತು ಮೇಕಿಂಗ್ ವೀಡಿಯೋ ಬಿಡುಗಡೆಯಾದ ದಿನದಿಂದ ಮತ್ತೊಮ್ಮೆ ಕೇಳಿಬರುತ್ತಿದೆ. ಇದರಲ್ಲಿ ಎಷ್ಟು ನಿಜ, ಎಷ್ಟು ಸುಳ್ಳು ಎಂಬುದನ್ನು ಚಿತ್ರತಂಡದವರೇ ಖಚಿತಪಡಿಸಬೇಕು.
‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ನ ವಿಜಯ್ ಕಿರಗಂದೂರು ನಿರ್ಮಿಸುತ್ತಿದ್ದು, ರಿಷಭ್ ಶೆಟ್ಟಿ ನಿರ್ದೇಶನ ಮಾಡುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕಾಗಿ ಕುಂದಾಪುರ ಬಳಿ ದೊಡ್ಡ ಸ್ಟುಡಿಯೋ ಮಾಡಿ, ಅಲ್ಲಿ ಸೆಟ್‍ಗಳನ್ನು ಹಾಕಿ ಚಿತ್ರೀಕರಣ ಮಾಡಲಾಗಿದೆ. ಒಟ್ಟಾರೆ 250ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರಕ್ಕೆ ಚಿತ್ರೀಕರಣವಾಗಿರುವುದು ವಿಶೇಷ.
ಚಿತ್ರಕ್ಕೆ ಅರವಿಂದ್ ಕಶ್ಯಪ್ ಛಾಯಾಗ್ರಹಣ ಮತ್ತು ಅಜನೀಶ್ ಲೋಕನಾಥ್ ಸಂಗೀತವಿದೆ. ‘RRR’ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದ ಬಲ್ಗೇರಿಯಾ ಮೂಲದ ಟೊಡರ್ ಲ್ಯಾಜರೋವ್, ‘ಕಾಂತಾರ’ ಚಿತ್ರಕ್ಕೂ ಸಾಹಸ ನಿರ್ದೇಶನ ಮಾಡಿದ್ದಾರೆ.
‘ಕಾಂತಾರ – ಚಾಪ್ಟರ್ 1’ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಅಕ್ಟೋಬರ್ 02ರಂದು ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಇದನ್ನೂ ಓದಿ :-
ಹೆಚ್ಚಿನ ಓದಿಗಾಗಿ :-
Авторский MINI TATTOO https://kurs-mini-tattoo.ru дизайн маленьких тату, баланс и масштаб, безопасная стерилизация, грамотная анестезия, техника fine line и dotwork. Практика,…
Курсы маникюра https://econogti-school.ru и педикюра с нуля: теория + практика на моделях, стерилизация, архитектура ногтя, комбинированный/аппаратный маникюр, выравнивание, покрытие гель-лаком,…
7k casino 7к казино — это уникальная площадка для любителей азартных игр, предлагающая широкий выбор развлечений.
Ꭲhe passion ⲟf OMT’s creator, Ⅿr. Justin Tan,radiates wіtһ in teachings,inspiring Singapore pupils tⲟ fall for mathematics for examination success.…
En lo que respecta a sus promociones y bonificaciones, la slot Pirots 2 destaca por la posibilidad de obtener giros…





**mind vault**
mind vault is a premium cognitive support formula created for adults 45+. It’s thoughtfully designed to help maintain clear thinking