Shiva Rajkumar; ಪಿ. ವಾಸು ಸಹೋದರಿಯ ಮಗನ ಚಿತ್ರದಲ್ಲಿ ಶಿವಣ್ಣ ಅಭಿನಯ

ತಮಿಳಿನ ಜನಪ್ರಿಯ ನಿರ್ದೇಶಕ ಪಿ. ವಾಸು ನಿರ್ದೇಶನದ ‘ಶಿವಲಿಂಗ’ ಮತ್ತು ‘ಆಯುಷ್ಮಾನ್ ಭವ’ ಚಿತ್ರಗಳಲ್ಲಿ ಶಿವರಾಜಕುಮಾರ್ (Shiva Rajkumar) ಅಭಿನಯಿಸಿದ್ದರು. ಈಗ ಪಿ. ವಾಸು ಅವರ ಸಹೋದರಿಯ ಮಗನ ನಿರ್ದೇಶನದ ಚಿತ್ರದಲ್ಲಿ ಶಿವಣ್ಣ ನಟಿಸುವುದಕ್ಕೆ ಸಜ್ಜಾಗಿದ್ದಾರೆ.
ಇತ್ತೀಚೆಗೆ ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಶಿವರಾಜಕುಮಾರ್ ಅಭಿನಯದ ಹೊಸ ಚಿತ್ರದ ಘೋಷಣೆ ಅಧಿಕೃತವಾಗಿ ಆಗಿದೆ. ಶ್ರಿತಿಕ್ ಮೋಷನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಸಾಗರ್, ಕೃಷ್ಣಕುಮಾರ್ ಹಾಗೂ ಸೂರಜ್ ಶರ್ಮ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಿ. ವಾಸು ಸೋದರರಳಿಯ ಬಾಲಾಜಿ ಮಾಧವನ್ ನಿರ್ದೇಶನ ಮಾಡಲಿದ್ದಾರೆ.
ಕಳೆದ ವರ್ಷ ಬಿಡುಗಡೆಯಾದ ‘ಇಡಿ ಮಿನ್ನಲ್ ಕಾದಲ್’ ಎಂಬ ಚಿತ್ರವನನ್ನು ಬಾಲಾಜಿ ಮಾಧವನ್ ನಿರ್ದೇಶನ ಮಾಡಿದ್ದರು. ಸಿಬಿ ಭುವನಚಂದ್ರನ್, ಭವ್ಯ ತ್ರಿಖಾ ಮುಂತಾದವರು ನಟಿಸಿದ್ದ ಈ ಚಿತ್ರವು ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಈಗ ಶಿವರಾಜಕುಮಾರ್ ಅವರಿಗಾಗಿ ಹೊಸ ಕಥೆ ಬರೆದಿರುವ ಬಾಲಾಜಿ ಮಾಧವನ್‍್, ಕನ್ನಡದಲ್ಲಿ ಮೊದಲ ಚಿತ್ರವನ್ನು ನಿರ್ದೇಶಿಸುವುದಕ್ಕೆ ಸಜ್ಜಾಗಿದ್ದಶರೆ.
ಇತ್ತೀಚೆಗೆ ಶಿವರಾಜಕುಮಾರ್ ಅವರನ್ನು ಭೇಟಿ ಮಾಡಿದ ನಿರ್ದೇಶಕ ಬಾಲಾಜಿ ಮಾಧವನ್ ಹಾಗೂ ನಿರ್ಮಾಪಕರಾದ ಸಾಗರ್, ಕೃಷ್ಣಕುಮಾರ್ ಮತ್ತು ಸೂರಜ್ ಶರ್ಮ ಭೇಟಿ ಮಾಡಿ ಹೊಸ ಚಿತ್ರದ ಕುರಿತು ಮಾತನಾಡಿದ್ದಾರೆ. ಚಿತ್ರದ ಕಥೆ ಕೇಳಿ ಶಿವಣ್ಣ ಸಂತಸಗೊಂಡಿದ್ದಾರೆ. ಸದ್ಯದಲ್ಲೇ ಶೀರ್ಷಿಕೆಯನ್ನು ಅದ್ದೂರಿಯಾಗಿ ಅನಾವರಣಗೊಳಿಸುವ ಸಿದ್ಧತೆ ನಡೆಸಿರುವ ನಿರ್ಮಾಪಕರು ಆ ಸಮಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.
ಶಿವರಾಜಕುಮಾರ್ ಸದ್ಯ ‘ಶಿವಣ್ಣ 131’ ಚಿತ್ರದಲ್ಲಿ ನಟಿಸುತ್ತಿದ್ದು, ರಾಮಚರಣ್ ತೇಜ ಅಭಿನಯದ ತೆಲುಗು ಚಿತ್ರ ‘ಪೆದ್ದಿ’ ಸೇರಿದಂತೆ ಇನ್ನೊಂದಿಷ್ಟು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಮಾಲಾಜಿ ಮಾಧವನ್ ನಿರ್ದೇಶನದ ಹೊಸ ಚಿತ್ರ ಯಾವಾಗ ಶುರುವಾಗುತ್ತದೋ ನೋಡಬೇಕು.
ಇದನ್ನೂ ಓದಿ:-
ಹೆಚ್ಚಿನ ಓದಿ:-
[…] […]
[…] […]
[…] Yuddakanda box office collection; ಗಳಿಕೆ ಗೊತ್ತಿಲ್ಲ, ಒಳ್ಳೆಯ ಪ್ರಯತ್ನ ಗೆದ್ದಿದೆ ಎಂದ ಅಜೇಯ್ ರಾವ್ […]
[…] Yuva Rajkumar Ekka; ‘ಎಕ್ಕ’ದಲ್ಲಿ ಪುನೀತ್ ಅವರನ್ನು ನೆನಪಿಸಿದ ಯುವ ರಾಜಕುಮಾರ್ […]
[…] […]