‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಿಂದ Sonu Nigam ಹಾಡಿಗೆ ಗೇಟ್ ಪಾಸ್

ಕನ್ನಡ ಮತ್ತು ಕನ್ನಡಿಗರ ವಿರುದ್ಧ ಬಾಲಿವುಡ್ ಗಾಯಕ ಸೋನು ನಿಗಮ್ (Sonu Nigam) ಆಡಿದ ಅವಹೇಳನಕಾರಿ ಮಾತಿಗೆ ಕರ್ನಾಟಕದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ, ‘ಕುಲದಲ್ಲಿ ಕೀಳ್ಯಾವುದೋ’ (Kuladalli Keelyavudo) ಚಿತ್ರತಂಡವು ಚಿತ್ರಕ್ಕೆ ಸೋನು ನಿಗಮ್ ಹಾಡಿರುವ ‘ಮನಸ್ಸು ಹಾಡ್ತದೆ ವಯಸ್ಸು ಕಾಡ್ತದೆ…’ ಎಂಬ ಹಾಡನ್ನು ಕಿತ್ತುಹಾಕಲು ತೀರ್ಮಾನಿಸಿದೆ.
ಈ ಕುರಿತು ಚಿತ್ರದ ನಿರ್ದೇಶಕ ರಾಮನಾರಾಯಣ್ ಮಾತನಾಡಿ, ‘ಸೋನು ನಿಗಮ್ ಅವರು ಉತ್ತಮ ಗಾಯಕರು ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಕನ್ನಡದ ಬಗ್ಗೆ ಆಡಿರುವ ಮಾತು ನಮಗೆ ತುಂಬಾ ಬೇಸರವಾಗಿದೆ. ನಮ್ಮ ಚಿತ್ರಕ್ಕೆ ಸೋನು ನಿಗಮ್ ಮೂರು ತಿಂಗಳ ಹಿಂದೆ ಹಾಡೊಂದನ್ನು ಹಾಡಿದ್ದರು. ಮನೋಮೂರ್ತಿ ಅವರು ಸಂಗೀತ ನೀಡಿರುವ ಹಾಗೂ ಯೋಗರಾಜ್ ಭಟ್ ಬರೆದಿರುವ ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಜನಪ್ರಿಯವೂ ಆಗಿದೆ. ಆದರೆ, ಸೋನು ನಿಗಮ್ ಅವರು ಕನ್ನಡಕ್ಕೆ ಮಾಡಿರುವ ಅವಮಾನವನ್ನು ಸಹಿಸದ ನಾವು ಅವರ ಧ್ವನಿಯಲ್ಲಿ ಮೂಡಿಬಂದಿರುವ ಹಾಡನ್ನು ತೆಗೆದು ಹಾಕಿದ್ದೇವೆ. ಇದೇ ಹಾಡನ್ನು ಕನ್ನಡದ ಗಾಯಕ ಚೇತನ್ ಅವರ ಬಳಿ ಹಾಡಿಸಿದ್ದೇವೆ. ಸದ್ಯದಲ್ಲೇ ಬಿಡುಗಡೆ ಮಾಡುತ್ತೇವೆ. ಇದಕ್ಕೆ ಸಂಗೀತ ನಿರ್ದೇಶಕ ಮನೋಮೂರ್ತಿ ಹಾಗೂ ಗೀತರಚನೆಕಾರ ಯೋಗರಾಜ್ ಭಟ್ ಅವರ ಒಪ್ಪಿಗೆ ಇದೆ’ ಎಂದು ಹೇಳಿದರು.
ನಮಗೆ ಮೊದಲು ಕನ್ನಡ ಮುಖ್ಯ ಆಮೇಲೆ ಮಿಕ್ಕಿದ್ದು, ಎನ್ನುವ ನಿರ್ಮಾಪಕ ಸಂತೋಷ್, ‘ಸೋನು ನಿಗಮ್ ಅವರಿಂದ ಈ ರೀತಿಯ ವರ್ತನೆ ನಿರೀಕ್ಷಿಸಿರಲಿಲ್ಲ. ಘಟನೆ ನಡೆದು ಕೆಲವು ದಿನಗಳ ನಂತರ ಇತ್ತೀಚೆಗೆ ಅವರು ಕ್ಷಮೆ ಕೇಳಿದ ವಿಡಿಯೋ ನೋಡಿದೆ. ಅವರು ಒಲ್ಲದ ಮನಸ್ಸಿನಿಂದ ಯಾರದೋ ಬಲವಂತಕ್ಕೆ ಕ್ಷಮೆ ಕೇಳಿದ ಹಾಗಿದೆ. ಈ ವಿಷಯದಿಂದ ನಮ್ಮ ಚಿತ್ರತಂಡಕ್ಕೆ ಬಹಳ ಬೇಸರವಾಗಿದೆ. ಹಾಗಾಗಿ ಅವರ ಧ್ವನಿಯಲ್ಲಿ ಮೂಡಿಬಂದಿರುವ ಹಾಡನ್ನು ತೆಗೆದು ಹಾಕುವ ತೀರ್ಮಾನಕ್ಕೆ ಬಂದಿದ್ದೇವೆ’ ಎಂದು ತಿಳಿಸಿದರು.
ಮೇ.23ರಂದು ಬಿಡುಗಡೆಯಾಗಲಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವನ್ನು ಪರ್ಲ್ ಸಿನಿಮಾಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಮತ್ತು ವಿದ್ಯಾ ನಿರ್ಮಿಸುತ್ತಿದ್ದಾರೆ. ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ – ನಾಯಕಿಯಾಗಿ ನಟಿಸಿರುವ ಚಿತ್ರದಲ್ಲಿ ಯೋಗರಾಜ್ ಭಟ್, ಶರತ್ ಲೋಹಿತಾಶ್ವ, ಸೋನಾಲ್ ಮಾಂತೆರೋ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ:-
ಹೆಚ್ಚಿನ ಓದಿಗೆ:-
[…] Jungle Mangal; ಅರಣ್ಯದಲ್ಲಿ ಬಂಧಿಯಾದ Yash Shetty […]
[…] […]
[…] […]
[…] Ramayana Rocking Star Yash ಫಸ್ಟ್ ಲುಕ್ […]
[…] Ramayana Rocking Star Yash ಫಸ್ಟ್ ಲುಕ್ […]
One thought on “‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಿಂದ Sonu Nigam ಹಾಡಿಗೆ ಗೇಟ್ ಪಾಸ್”