
The Rise of Ashoka; ‘ಅಶೋಕ ಬ್ಲೇಡ್’ ಈಗ ‘ದಿ ರೈಸ್ ಆಫ್ ಅಶೋಕ’; ಸದ್ಯದಲ್ಲೇ ಚಿತ್ರೀಕರಣ
ಸತೀಶ್ ನೀನಾಸಂ ಅಭಿನಯದಲ್ಲಿ ಎರಡೂವರೆ ವರ್ಷಗಳ ಹಿಂದೆ ‘ಅಶೋಕ ಬ್ಲೇಡ್’ ಚಿತ್ರ ಪ್ರಾರಂಭವಾಗಿದ್ದು ನೆನಪಿರಬಹುದು. ಚಿತ್ರದ ಚಿತ್ರೀಕರಣ ಸಹ ಬಹುತೇಕ ಮುಗಿದಿತ್ತು. ಆದರೆ, ಆ ಚಿತ್ರದ ಬಜೆಟ್ ಹೆಚ್ಚಾದ್ದರಿಂದ ನಿರ್ದೇಶಕ ಮತ್ತು ನಿರ್ಮಾಪಕರಲ್ಲೊಬ್ಬರಾದ ವಿನೋದ್ ಧೋಂಡಾಳೆ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡರು. ಇನ್ನು, ಚಿತ್ರ ಪ್ರಾರಂಭವಾಗುವುದಿಲ್ಲ ಎಂಬ ಮಾತುಗಳು ಹರಿದಾಡುತ್ತಿರುವಾಗಲೇ ಚಿತ್ರ ಪುನಃ ಶುರುವಾಗುತ್ತಿರುವ ಸುದ್ದಿ ಇದೆ. ‘ಅಶೋಕ ಬ್ಲೇಡ್’ ಚಿತ್ರಕ್ಕೆ ‘ದಿ ರೈಸ್ ಆಫ್ ಅಶೋಕ’ ಎಂಬ ಹೆಸರನ್ನು ಇಡಲಾಗಿದ್ದು, ಈ ಶೀರ್ಷಿಕೆಯಲ್ಲೇ ಚಿತ್ರ ಬಿಡುಗಡೆಯಾಗಲಿದೆ….