ಶಿವರಾಜಕುಮಾರ್ ಆಪರೇಷನ್‍ ಯಶಸ್ವಿ: ಅವರೀಗ ಕ್ಯಾನ್ಸರ್ ಮುಕ್ತ

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಶಿವರಾಜಕುಮಾರ್, ಇದೀಗ ಕ್ಯಾನ್ಸರ್ ಮುಕ್ತರಾಗಿದ್ದಾರೆ. ಹೊಸ ವರ್ಷದ ಮೊದಲ ದಿನ ವೀಡಿಯೋ ಬಿಡುಗಡೆ ಮಾಡಿರುವ ಅವರು, ‘ಕ್ಯಾನ್ಸರ್ ಪೀಡಿ ಮೂತ್ರಕೋಶವನ್ನು ತೆಗೆದಿದ್ದಾರೆ. ನಾನೀಗ ಕ್ಯಾನ್ಸರ್ ಫ್ರೀ. ಇನ್ನು ಕೆಲವು ತಿಂಗಳುಗಳಲ್ಲಿ ಮತ್ತೆ ನಿಮ್ಮ ಮುಂದೆ ಹಳೆಯ ಶಿವಣ್ಣನಾಗಿ ಬರಲಿದ್ದೇನೆ’ ಎಂದು ಘೋಷಿಸಿದ್ದಾರೆ. ಈ ಮೂಲಕ ಅಭಿಮಾನಿಗಳಲ್ಲಿದ್ದ ಆತಂಕವನ್ನು ದೂರ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಶಿವರಾಜಕುಮಾರ್‍ ಅವರಿಗೆ ಡಿ. 24ರಂದು ಅಮೇರಿಕಾದ ಮಿಯಾಮಿಯಲ್ಲಿ ಶಸ್ತ್ರಚಿಕಿತ್ಸೆ ನಡೆದಿತ್ತು. ತಮಿಳು ನಾಡು ಮೂಲದ…

Read More