
ಹುಚ್ಚನಿಂದ ಸ್ಫೂರ್ತಿ ಪಡೆದು ‘ತುರ್ರಾ’ ಹಾಡು ಬರೆದ ಯೋಗರಾಜ್ ಭಟ್
‘ಮನದ ಕಡಲು’ ಚಿತ್ರಕ್ಕೆ ಸಂಬಂಧಿಸಿದಂತೆ ವಾರಕ್ಕೊಂದು ಪತ್ರಿಕಾಗೋಷ್ಠಿ ಮಾಡುತ್ತಿದ್ದಾರೆ ನಿರ್ದೇಶಕ ಯೋಗರಾಜ್ ಭಟ್. ಮೊದಲು ಚಿತ್ರದ ಮೊದಲ ನೋಟ ಬಿಡುಗಡೆಯಾಯಿತು. ಆ ನಂತರ ‘ಹೂ ದುಂಬಿಯ ಕಥೆಯ’ ಎಂಬ ಹಾಡನ್ನು ಅವರು ಬಿಡುಗಡೆ ಮಾಡಿದರು. ಈಗ ಚಿತ್ರದ ಎರಡನೇ ಹಾಡನ್ನು ಇದೀಗ ಬಿಡುಗಡೆ ಮಾಡಲಾಗಿದೆ. ‘ತುರ್ರಾ’ ಎಂಬ ಈ ಹಾಡನ್ನು ಯೋಗರಾಜ್ ಭಟ್ ಬರೆದಿದ್ದು, ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ವಿ. ಹರಿಕೃಷ್ಣ, ಸಂಜಿತ್ ಹಗ್ಡೆ ಹಾಗೂ ಪ್ರಾರ್ಥನಾ ಈ ಹಾಡನ್ನು ಹಾಡಿದ್ದಾರೆ. ನೆಲಮಂಗಲದ ಬಳಿಯಿರುವ…