
‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡಕ್ಕೀಗ ನಿರಾಳ; ತಡೆಯಾಜ್ಞೆ ತೆರವು ಗೊಳಿಸಿದ ನ್ಯಾಯಲಯ
ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆದುರಾದ ಸಂಕಷ್ಟ ಇದೀಗ ಬಗೆಹರಿದಿದೆ. ಚಿತ್ರವು ಶುಕ್ರವಾರ (ಜನವರಿ 10) ಬಿಡುಗಡೆ ಆಗಬೇಕಿತ್ತು. ಆದರೆ, ಹೈದರಾಬಾದ್‍ನ ನ್ಯಾಯಾಲಯವು ಚಿತ್ರದ ಬಿಡುಗಡೆ ಮೇಲೆ ತಡೆಯಾಜ್ಞೆ ನೀಡಿದ್ದರಿಂದ, ಚಿತ್ರವು ಅಂದುಕೊಂಡಂತೆ ಬಿಡುಗಡೆ ಆಗಲಿಲ್ಲ. ಇದೀಗ ನ್ಯಾಯಲಯವು ತಡೆಯಾಜ್ಞೆನ್ನು ತೆರವುಗೊಳಿಸಿದ್ದು, ಸಮಸ್ಯೆ ಎದುರಾದಷ್ಟೇ ಬೇಗ ಪರಿಹಾರವೂ ಸಿಕ್ಕಿದೆ. ಚಿತ್ರದ ಬಿಡುಗಡೆಗೆ ಅನುಮತಿ ಸಿಕ್ಕ ಹಿನ್ನೆಲೆಯಲ್ಲಿ ‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡ ನಿರಾಳವಾಗಿದ್ದು, ಸದ್ಯದಲ್ಲೇ ಚಿತ್ರದ ಹೊಸ…