
ಮುಂದಕ್ಕೆ ಹೋಯ್ತು ‘ಸಂಜು ವೆಡ್ಸ್ ಗೀತಾ 2’; ಈ ವಾರ ಬಿಡುಗಡೆ ಇಲ್ಲ
ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಬಿಡುಗಡೆ ಅನಿವಾರ್ಯ ಕಾರಣಗಳಿಂದ ಮುಂದಕ್ಕೆ ಹೋಗಿದೆ. ಚಿತ್ರದ ಹೊಸ ಬಿಡುಗಡೆ ದಿನಾಂಕ ಇನ್ನಷ್ಟೇ ಘೋಷಣೆಯಾಗಬೇಕಿದ್ದು, ಸದ್ಯದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಎರಡು ದಿನಗಳ ಹಿಂದೆಯೇ ಚಿತ್ರದ ಬಿಡುಗಡೆ ಅನುಮಾನ ಎಂಬ ಸುದ್ದಿಯೂ ಕೇಳಿಬಂದಿತ್ತು. ಅದಕ್ಕೆ ಕಾರಣ, ಸ್ಟೇ ಆರ್ಡರ್ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ನಿರ್ಮಾಪಕರು ಫೈನಾನ್ಶಿಯರ್‌ಗಳ…