
BIFFESನ ರಾಯಭಾರಿಯಾಗಿ ನಟ ಕಿಶೋರ್ ನೇಮಕ
ಕೆಲವೇ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಿಕಾಗೋಷ್ಠಿ ಮಾಡಿ, ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಕುರಿತಾಗಿ ಒಂದಿಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಇದೀಗ ಚಿತ್ರೋತ್ಸವ ಸಮಿತಿಯಿಂದ ಇನ್ನೊಂದು ಸುದ್ದಿ ಬಂದಿದ್ದು, ನಟ ಕಿಶೋರ್ ಈ ಬಾರಿ ಚಿತ್ರೋತ್ಸವದ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಕನ್ನಡ ಮೂಲದ ಕಿಶೋರ್, ತೆಲುಗು ಮತ್ತು ತಮಿಳು ಸೇರಿದಂತೆ ಬೇರೆ ಭಾಷೆಯ ಚಿತ್ರಗಳಲ್ಲೂ ತಮ್ಮ ಪ್ರತಿಭೆಯಿಂದ ಹೆಸರು ಮಾಡಿದವರು. ಇದೀಗ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFES) ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಕಳೆದ ಬಾರಿ ನಟ ಧನಂಜಯ್ ರಾಯಭಾರಿಯಾಗಿದ್ದು,…