
‘ಭಾರ್ಗವ’ನ ಜೊತೆಯಾದ Ankitha Amar; ಉಪೇಂದ್ರ ಹೊಸ ಚಿತ್ರಕ್ಕೆ ನಾಯಕಿ
ಕಳೆದ ವರ್ಷ ಬಿಡುಗಡೆಯಾದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ತಮ್ಮ ನಟನೆ ಮೂಲಕ ಗಮನ ಸೆಳೆದವರು ಕಿರುತೆರೆ ನಟಿ ಅಂಕಿತಾ ಅಮರ್. ನಾಯಕಿಯಾಗಿ ನಟಿಸಿದ ಮೊದಲ ಚಿತ್ರದಲ್ಲೇ ಮೆಚ್ಚುಗೆ ಪಡೆದಿದ್ದ ಅವರು, ಇದೀಗ ಅವರು ‘ಭಾರ್ಗವ’ (Bhargava) ಚಿತ್ರದಲ್ಲಿ ಉಪೇಂದ್ರ ಎದುರು ನಾಯಕಿಯಾಗಿ ನಟಿಸುತ್ತಿದ್ದಾರೆ ಎಂಬ ಮಾತೊಂದು ಕೇಳಿ ಬರುತ್ತಿದೆ. ಉಪೇಂದ್ರ ಅಭಿನಯದ ಹೊಸ ಚಿತ್ರವು ಯುಗಾದಿ ಹಬ್ಬದಂದು ಘೋಷಣೆಯಾಗಿತ್ತು. ಆ ನಂತರ ಅಕ್ಷಯ ತೃತೀಯ ದಿನದಂದು ಚಿತ್ರಕ್ಕೆ ‘ಭಾರ್ಗವ’ ಎಂಬ ಹೆಸರನ್ನು ಇಡಲಾಗಿತ್ತು. ಇದೀಗ ಚಿತ್ರಕ್ಕೆ…