
‘The Devil’ ಚಿತ್ರದ ಚಿತ್ರೀಕರಣ ಮುಕ್ತಾಯ; ಅ.31ಕ್ಕೆ ಚಿತ್ರ ಬಿಡುಗಡೆ?
ದರ್ಶನ್ ಅಭಿನಯದ ‘ದಿ ಡೆವಿಲ್’ (The devil) ಚಿತ್ರದ ಮಾತಿನ ಭಾಗದ ಚಿತ್ರೀಕರಣ ಕಳೆದ ತಿಂಗಳೇ ಮುಗಿದಿತ್ತು. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇತ್ತು. ಇದೀಗ ಚಿತ್ರತಂಡವು ಇತ್ತೀಚೆಗೆ ಥಾಯ್ಲೆಂಡ್‍ನಲ್ಲಿ ಚಿತ್ರದ ಹಾಡುಗಳ ಚಿತ್ರೀಕರಣ ಮುಗಿಸಿದೆ. ಜೊತೆಗೆ ಡಬ್ಬಿಂಗ್ ಸಹ ಮುಗಿದಿದೆಯಂತೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಅಕ್ಟೋಬರ್ 31ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ‘ದಿ ಡೆವಿಲ್’ ಚಿತ್ರದ ಹಾಡುಗಳ ಚಿತ್ರೀಕರಣ ಈ ಮೊದಲೇ ಮುಗಿಯಬೇಕಿತ್ತು. ಆದರೆ, ವಿದೇಶಕ್ಕೆ ಹೋಗಿ ಚಿತ್ರೀಕರಣ ಮಾಡುವುದಕ್ಕೆ ನ್ಯಾಯಾಲಯವು…