
Kiccha Sudeep; ಅತ್ಯುತ್ತಮ ನಟ ಪ್ರಶಸ್ತಿಯನ್ನು ತಿರಸ್ಕರಿಸಿದ ಸುದೀಪ್; ಅರ್ಹರಿಗೆ ಕೊಡಲು ಮನವಿ
2019ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು (Karnataka State Film Award) ಬುಧವಾರ ಘೋಷಣೆಯಾಗಿದೆ. ಪ್ರಶಸ್ತಿಗಳ ಕುರಿತು ಚರ್ಚೆ ನಡೆಯುತ್ತಿರುವಾಗಲೇ, ತಮಗೆ ಸಿಕ್ಕ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸುದೀಪ್ (Kichcha Sudeep) ತಿರಸ್ಕರಿಸಿದ್ದಾರೆ. ಈ ಪ್ರಶಸ್ತಿಯನ್ನು ಅರ್ಹರಿಗೆ ಕೊಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ಸುದೀಪ್ ಅವರಿಗೆ ರಾಜ್ಯ ಸರ್ಕಾರವು ಅತ್ಯುತ್ತಮ ನಟ ಪ್ರಶಸ್ತಿಯನ್ನು ಘೋಷಿಸಿತ್ತು. ಇದು ಅವರಿಗೆ ಸಿಗುತ್ತಿರುವ ಎರಡನೇ ಪ್ರಶಸ್ತಿ. ಈ ಹಿಂದೆ ‘ನಂದಿ’ ಚಿತ್ರದ ಅಭಿನಯಕ್ಕಾಗಿ ರಾಜ್ಯ ಸರ್ಕಾರದಿಂದ ಸುದೀಪ್ಗೆ…