
ಪ್ರತಿಯೊಬ್ಬರಲ್ಲೂ ಇರುವ ರಾಕ್ಷಸನ ಕಥೆ ‘ಗ್ರೀನ್’; ಟೀಸರ್ ಬಿಡುಗಡೆ
ಕಾನ್ಸ್ ವರ್ಲ್ಡ್ ಫಿಲಂ ಫೆಸ್ಟಿವಲ್‍ನಲ್ಲಿ ಅತ್ಯುತ್ತಮ ಭಾರತೀಯ ಚಿತ್ರ ಮತ್ತು ಭವಿಷ್ಯದ ನಿರ್ದೇಶಕ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುವುದರ ಜೊತೆಗೆ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿರುವ ‘ಗ್ರೀನ್’ (Green kannada Movie) ಚಿತ್ರವು ಇದೀಗ ರಾಜ್ಯದಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಗ್ರೀನ್’ ಚಿತ್ರದಲ್ಲಿ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ…