Adonditthu kaala movie song release; 16 ವರ್ಷದ ಹುಡುಗನಾದ ವಿನಯ್‍ ರಾಜಕುಮಾರ್ …

ನಾಲ್ಕು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ವಿನಯ್‍ ರಾಜಕುಮಾರ್ ಅಭಿನಯದ ‘ಅಂದೊಂದಿತ್ತು ಕಾಲ’ ಅದ್ಯಾಕೋ ಕುಂಟುತ್ತಾ ಸಾಗಿ, ಇದೀಗ ಕೊನೆಗೂ ಬಿಡುಗಡೆಯ ಹಂತಕ್ಕೆ ಬಂದು ತಲುಪಿದೆ. ಕೆಲವು ದಿನಗಳ ಹಿಂದೆ, ಚಿತ್ರದ ಮೊದಲ ಹಾಡನ್ನು ಗಣೇಶ್‍ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದರು. ಇದೀಗ ‘ಅರೇರೇ ಯಾರೋ ಇವಳು …’ ಎಂಬ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ಇಡೀ ರಾಜ್ಯಕ್ಕೆ 10ನೇ ತರಗತಿಯಲ್ಲಿ ಫಸ್ಟ್ ಬಂದ ಮಲ್ಲಸಂದ್ರದಲ್ಲಿರುವ ಬಿ.ಎನ್.ಆರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಬಿಡುಗಡೆ ಮಾಡಿಸಲಾಯಿತು. ಈ ಚಿತ್ರದ ಕುರಿತು ಮಾತನಾಡಿದ ವಿನಯ್‍ ರಾಜಕುಮಾರ್, ‘ಇದು ನನ್ನ ಮೆಚ್ಚಿನ ಗೀತೆ. ನಾನು ನಿರ್ದೇಶಕ ಕೀರ್ತಿಗೆ ಇದನ್ನೇ ಮೊದಲು ಬಿಡುಗಡೆ ಮಾಡಿ ಎಂದಿದ್ದೆ. ಈ ಚಿತ್ರದಲ್ಲಿ ನಾನು 16 ವರ್ಷದ ಹುಡುಗನ ಗೆಟಪ್‍ನಲ್ಲಿ ಕಾಣಿಸಿಕೊಂಡಿದ್ದೇನೆ. ಅದು ನಿಜವಾಗಲೂ…

Read More