
Karnataka Buget 2025: ಆಯ-ವ್ಯಯದಲ್ಲಿ ಸಿನಿಮಾಕ್ಕೆ ಸಿಕ್ಕಿದ್ದೆಷ್ಟು?
ಬೆಂಗಳೂರು: ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಈ ಬಾರಿಯ ಬಜೆಟ್‌ನಲ್ಲಿ ಚಲನ ಚಿತ್ರ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಸರ್ಕಾರ ಘೋಷಿಸಿದೆ. (Karnataka Buget 2025) ರಾಜ್ಯದ ಮಲ್ಟಿಪ್ಲೆಕ್ಸ್‌ಗಳೂ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರವನ್ನು ₹200ಕ್ಕೆ ಸೀಮಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಚಲನಚಿತ್ರ ಅಕಾಡೆಮಿಯು ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರ ಸಮುಚ್ಚಯವನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ….