Sonu Nigam

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಿಂದ Sonu Nigam ಹಾಡಿಗೆ ಗೇಟ್‌ ಪಾಸ್‌

ಕನ್ನಡ ಮತ್ತು ಕನ್ನಡಿಗರ ವಿರುದ್ಧ ಬಾಲಿವುಡ್‍ ಗಾಯಕ ಸೋನು ನಿಗಮ್‍ (Sonu Nigam) ಆಡಿದ ಅವಹೇಳನಕಾರಿ ಮಾತಿಗೆ ಕರ್ನಾಟಕದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ, ‘ಕುಲದಲ್ಲಿ ಕೀಳ್ಯಾವುದೋ’ (Kuladalli Keelyavudo) ಚಿತ್ರತಂಡವು ಚಿತ್ರಕ್ಕೆ ಸೋನು ನಿಗಮ್‍ ಹಾಡಿರುವ ‘ಮನಸ್ಸು ಹಾಡ್ತದೆ ವಯಸ್ಸು ಕಾಡ್ತದೆ…’ ಎಂಬ ಹಾಡನ್ನು ಕಿತ್ತುಹಾಕಲು ತೀರ್ಮಾನಿಸಿದೆ. ಈ ಕುರಿತು ಚಿತ್ರದ ನಿರ್ದೇಶಕ ರಾಮನಾರಾಯಣ್‍ ಮಾತನಾಡಿ, ‘ಸೋನು ನಿಗಮ್ ಅವರು ಉತ್ತಮ ಗಾಯಕರು ಎಂಬುದರಲ್ಲಿ‌ ಯಾವುದೇ ಸಂಶಯವಿಲ್ಲ. ಆದರೆ, ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಕನ್ನಡದ…

Read More

Kuladalli Keelyavudo; ಆನೆ ಬಿಡುಗಡೆ ಮಾಡಿತು ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ (Kuladalli Keelyavudo) ಚಿತ್ರವು ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರವನ್ನು ಜನರಿಗೆ ತಲುಪಿಸುವುದಕ್ಕೆ ಚಿತ್ರತಂಡ ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಇತ್ತೀಚೆಗೆ ಕುಂಭ ಮೇಳದಲ್ಲಿ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಲಾಗಿತ್ತು. ಯೋಗರಾಜ್‍ ಭಟ್‍ ಬರೆದಿರುವ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗಿತ್ತು. ಈಗ ಚಿತ್ರದ ಇನ್ನೊಂದು ಹಾಡನ್ನು ಬಿಡುಗಡೆ ಮಾಡಲಾಗಿದೆ. ಬರೀ ಬಿಡುಗಡೆ ಮಾಡಲಾಗಿದೆ ಅಷ್ಟೇ ಅಲ್ಲ, ವಿಶೇಷವಾಗಿ ಬಿಡುಗಡೆ ಮಾಡಿಸಲಾಗಿದೆ….

Read More