
ಬಹಳ ವರ್ಷಗಳ ನಂತರ ಬಾಲಿವುಡ್ ಚಿತ್ರದಲ್ಲಿ Priyanka Upendra
ಪ್ರಿಯಾಂಕಾ ಉಪೇಂದ್ರ (Priyanka Upendra) ಅವರು ಕನ್ನಡ, ತೆಲುಗು, ಬಂಗಾಲಿ ಚಿತ್ರಗಳಲ್ಲಿ ನಟಿಸುವುದರ ಜೊತೆಗೆ ಬಾಲಿವಡ್ ಚಿತ್ರಗಳಲ್ಲೂ ನಟಿಸಿದ್ದಾರೆ. ಈಗಾಗಲೇ ಅವರು ‘ಮುಜೆ ಮೇರಿ ಬೀವಿ ಸೆ ಬಚಾವ್’, ‘ಸೌತೇಲ’, ‘ದುರ್ಗ’, ‘ಎನಿಮಿ’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ಬಹಳ ವರ್ಷಗಳ ನಂತರ ಅವರು ಬಾಲಿವುಡ್ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. 22 ವರ್ಷದ ಕನ್ನಡತಿ ಕರೆನ್ ಕ್ಷಿತಿ ಸುವರ್ಣ ಇದೀಗ ‘ಸೆಪ್ಟೆಂಬರ್ 21’ ಹೆಸರಿನ ಬಾಲಿವುಡ್ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಬೆಂಗಳೂರು ಮೂಲದ ಆಲ್ಝೈಮರ್ ರೋಗಿ ಮತ್ತು ಆತನ ಆರೈಕೆ…