
Ragini Dwivedi; ಸೋಮನಹಳ್ಳಿಯಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ತೆರೆಯುತ್ತಿದ್ದಾರಂತೆ ರಾಗಿಣಿ
ಗೀತಪ್ರಿಯ ಅಭಿನಯದ ‘ತಾಯವ್ವ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಸಾತ್ವಿಕ್ ಪವನ್ ಕುಮಾರ್ (Satvik Pavan Kumar) ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷವೆಂದರೆ, ಇದುವರೆಗೂ ಸಾಕಷ್ಟು ಗ್ಲಾಮರಸ್ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಾಗಿಣಿ ದ್ವಿವೇದಿ, (Ragini Dwivedi) ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ಪಕ್ಕಾ ಹಳ್ಳಿ ಹುಡುಗಿಯ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈಗಾಗಲೇ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಬಹುತೇಕ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿದ್ದು, ಇತ್ತೀಚೆಗಷ್ಟೇ ಚಿತ್ರತಂಡ ಸಿನೆಮಾದ ಶೀರ್ಷಿಕೆಯನ್ನು ಬಿಡುಗಡೆಗೊಳಿಸಿದೆ….