
ತಂದೆ-ಮಗನಾದ ವಿಜಯ್ ರಾಘವೇಂದ್ರ; ‘ರುದ್ರಾಭಿಷೇಕಂ’ನಲ್ಲಿ ವೀರಗಾಸೆ ಕಲಾವಿದ
ವಿಜಯ್ ರಾಘವೇಂದ್ರ ತಮ್ಮ 20 ಪ್ಲಸ್ ವರ್ಷಗಳ ಚಿತ್ರಜೀವನದಲ್ಲಿ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಯಾವೊಂದು ಚಿತ್ರದಲ್ಲೂ ಅವರು ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ‘ರುದ್ರಾಭಿಷೇಕಂ’ ಎಂಬ ಚಿತ್ರದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ ಕೆಲವು ದಿನಗಳ ಹಿಂದೆ ಪ್ರಾರಂಭವಾದ ‘ರುದ್ರಾಭಿಷೇಕಂ’ ಚಿತ್ರದಲ್ಲಿ ವಿಜಯ್ ರಾಘವೇಂದ್ರ, ತಂದೆ-ಮಗನಾಗಿ ಕಾಣಿಸಿಕೊಂಡಿದ್ದು, ಈ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಒಬ್ಬ ವೀರಗಾಸೆ ಕಲಾವಿದನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ನಮ್ಮ ನಾಡಿನ ಸಾಂಸ್ಕೃತಿಕ ಹಿನ್ನೆಲೆ, ಇತಿಹಾಸ, ಅದರ ವೈಭವವನ್ನು ಕಮರ್ಷಿಯಲ್…