
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗಾಗಿ Ragini Dwivedi ಜೊತೆಗೆ ಕೈ ಜೋಡಿಸಿದ Kumar Bangarappa
‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಎಂಬ ಚಿತ್ರದಲ್ಲಿ ರಾಗಿಣಿ ದ್ವಿವೇದಿ (Ragini Dwivedi) ಅಪ್ಪಟ ಗ್ರಾಮೀಣ ಮಹಿಳೆಯಾಗಿ ಅಭಿನಯಿಸುತ್ತಿದ್ದಾರೆ ಎಂಬ ವಿಷಯ ಕೆಲವೇ ದಿನಗಳ ಹಿಂದೆ ಓದಿದ ನೆನಪಿರಬಹುದು. ಈಗ ಆ ಚಿತ್ರ ಸೆಟ್ಟೇರಿದೆ. ವಿಶೇಷವೆಂದರೆ, ಈ ಚಿತ್ರಕ್ಕೆ ಅವರ ಜೊತೆಗೆ ಕುಮಾರ್ ಬಂಗಾರಪ್ಪ (Kumar Bangarappa) ಸಹ ಬಂದು ಸೇರಿಕೊಂಡಿದ್ದಾರೆ. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀಗಂಗಾಧರೇಶ್ವರ ದೇವಸ್ಥಾನದಲ್ಲಿ ನಡೆಯಿತು. ಹಿರಿಯ ನಟ ಶ್ರೀನಾಥ್…