Karnataka Buget 2025: ಆಯ-ವ್ಯಯದಲ್ಲಿ ಸಿನಿಮಾಕ್ಕೆ ಸಿಕ್ಕಿದ್ದೆಷ್ಟು?

ಬೆಂಗಳೂರು: ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಈ ಬಾರಿಯ ಬಜೆಟ್‌ನಲ್ಲಿ ಚಲನ ಚಿತ್ರ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಸರ್ಕಾರ ಘೋಷಿಸಿದೆ. (Karnataka Buget 2025) ರಾಜ್ಯದ ಮಲ್ಟಿಪ್ಲೆಕ್ಸ್‌ಗಳೂ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರವನ್ನು ₹200ಕ್ಕೆ ಸೀಮಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಚಲನಚಿತ್ರ ಅಕಾಡೆಮಿಯು ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರ ಸಮುಚ್ಚಯವನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ….

Read More

C. M. Siddaramaiah; ‘I Am god’ ಎಂದ ರವಿ ಗೌಡಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ

 ಮುಖ್ಯಮಂತ್ರಿ ಸಿದ್ದರಾಮಯ್ಯ(C. M Siddaramaiah) ಸಿನಿಮಾ ಸಮಾರಂಭಗಳಿಗೆ ಬರುವುದು ಕಡಿಮೆಯೇ. ಇದೀಗ ಅವರು ತಮ್ಮ ಆಪ್ತರೊಬ್ಬರ ಸಿನಿಮಾ ಸಮಾರಂಭದಲ್ಲಿ ಭಾಗವಹಿಸಿ ಚಿತ್ರದ ಶೀರ್ಷಿಕೆಯನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.  ಸಿದ್ದರಾಮಯ್ಯ ಅವರ ಆತ್ಮೀಯ ಗೆಳೆಯರಾದ ಮುಡಾ ಮಾಜಿ ಅಧ್ಯಕ್ಷ ಸಿ. ಬಸವೇಗೌಡ (C. Basavegouda) ಅವರ ಮಗನ ಹೊಸ ಪಯಣಕ್ಕೆ ಶುಭಾಶಯ ಕೋರಿದ್ದಾರೆ. ಈ ಹಿಂದೆ ‘ಧ್ವಜ’ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದ ರವಿ ಗೌಡ, ‘I Am god’ ಎಂಬ…

Read More
Siddaramaiah-Meets-Shivarajkumar

Siddaramaiah Meets Shivarajkumar; ಶಿವರಾಜಕುಮಾರ್ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಡಿಸೆಂಬರ್‌ ತಿಂಗಳಲ್ಲಿ ಶಸ್ತ್ರಚಿಕಿತ್ಸೆಗೆಂದು ಅಮೇರಿಕಾಗೆ ಹೋಗಿದ್ದ ಶಿವರಾಜಕುಮಾರ್‌, ಭಾನುವಾರವಷ್ಟೇ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಅವರನ್ನು ಚಿತ್ರರಂಗದವರು, ಅಭಿಮಾನಿಗಳು ಮತ್ತು ಹಿತೈಷಿಗಳು ಭವ್ಯವಾಗಿ ಬರಮಾಡಿಕೊಂಡಿದ್ದಾರೆ. ಶಿವರಾಜಕುಮಾರ್‌ ಇದೀಗ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಕ್ಯಾನ್ಸರ್‍ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಮಧ್ಯೆ, ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಶಿವರಾಜಕುಮರ್‌ ( Shivarajkumar) ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸೋಮವಾರ ಬೆಳಿಗ್ಗೆ ಶಿವರಾಜಕುಮಾರ್ ಮನೆಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ, ಕೆಲವು ಸಮಯ ಅವರ ನಿವಾಸದಲ್ಲಿ ಕಳೆಯುವುದರ ಜೊತೆಗೆ ಆದಷ್ಟು ಬೇಗ ಗುಣಮುಖರಾಗಿ ಎಂದು…

Read More