
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಿಂದ Sonu Nigam ಹಾಡಿಗೆ ಗೇಟ್ ಪಾಸ್
ಕನ್ನಡ ಮತ್ತು ಕನ್ನಡಿಗರ ವಿರುದ್ಧ ಬಾಲಿವುಡ್ ಗಾಯಕ ಸೋನು ನಿಗಮ್ (Sonu Nigam) ಆಡಿದ ಅವಹೇಳನಕಾರಿ ಮಾತಿಗೆ ಕರ್ನಾಟಕದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ, ‘ಕುಲದಲ್ಲಿ ಕೀಳ್ಯಾವುದೋ’ (Kuladalli Keelyavudo) ಚಿತ್ರತಂಡವು ಚಿತ್ರಕ್ಕೆ ಸೋನು ನಿಗಮ್ ಹಾಡಿರುವ ‘ಮನಸ್ಸು ಹಾಡ್ತದೆ ವಯಸ್ಸು ಕಾಡ್ತದೆ…’ ಎಂಬ ಹಾಡನ್ನು ಕಿತ್ತುಹಾಕಲು ತೀರ್ಮಾನಿಸಿದೆ. ಈ ಕುರಿತು ಚಿತ್ರದ ನಿರ್ದೇಶಕ ರಾಮನಾರಾಯಣ್ ಮಾತನಾಡಿ, ‘ಸೋನು ನಿಗಮ್ ಅವರು ಉತ್ತಮ ಗಾಯಕರು ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಕನ್ನಡದ…