
Suri Loves Sandhya: ‘ಸೂರಿ ಲವ್ಸ್ ಸಂಧ್ಯಾ’ ಚಿತ್ರದ ಪದೇ ಪದೇ ಹಾಡು ಬಿಡುಗಡೆ
ಅಭಿಮನ್ಯು ಕಾಶೀನಾಥ್ ಮತ್ತು ಅಪೂರ್ವ ನಾಯಕ-ನಾಯಕಿಯಾಗಿ ನಟಿಸಿರುವ ‘ಸೂರಿ ಲವ್ಸ್ ಸಂಧ್ಯಾ’ ಚಿತ್ರವು ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್ 06ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿರುವ ಈ ಚಿತ್ರದ ʻಪದೇ ಪದೇʼ ಎಂಬ ಲವ್ ಬ್ರೇಕ್ ಅಪ್ ಸಾಂಗ್ ಶಿವರಾತ್ರಿ ದಿನ ರಿಲೀಸ್ ಆಗಿದೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್‌ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿದೆ. ಈ ಹಾಡಿಗೆ ನಿರ್ದೇಶಕ ಯಾದವ್ ರಾಜ್ ಅವರೇ ಸಾಹಿತ್ಯ ಬರೆದಿದ್ದಾರೆ. ಎಸ್.ಎನ್. ಅರುಣಗಿರಿ ಸಂಗೀತ ಸಂಯೋಜಿಸಿದ್ದಾರೆ. ‘ಸೂರಿ ಲವ್ಸ್ ಸಂಧ್ಯಾ’ ಚಿತ್ರಕ್ಕೆ ಯಾದವ್ ರಾಜ್…