
Unlock Raghava; ಶಿವಮೊಗ್ಗದ ಭಾರತ್ ಸಿನಿಮಾಸ್ನಲ್ಲಿ ಬಿಡುಗಡೆ ಆಯಿತು ‘ಲಾಕ್ ಲಾಕ್’ ಹಾಡು
ಮಿಲಿಂದ್ ಮತ್ತು ರಚೆಲ್ ಡೇವಿಡ್ ಅಭಿನಯದ ‘ಅನ್ಲಾಕ್ ರಾಘವ’ ಚಿತ್ರವು ಫೆಬ್ರವರಿ 07ರಂದು ಬಿಡುಗಡೆಯಾಗಲಿದೆ. ಈ ಮಧ್ಯೆ, ಚಿತ್ರದ ‘ಲಾಕ್ ಲಾಕ್’ ಎಂಬ ಹಾಡು ಶಿವಮೊಗ್ಗದ ಭಾರತ್ ಸಿನಿಮಾಸ್ನಲ್ಲಿ ಮಂಗಳವಾರ ಬೆಳಿಗ್ಗೆ ಬಿಡುಗಡೆಯಾಗಿದೆ. ‘ಲಾಕ್ ಲಾಕ್ …’ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ರಚಿಸಿದ್ದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿಯಾಗಿದ್ದು, ಎ2 ಮ್ಯೂಸಿಕ್ ಚಾನಲ್ನಲ್ಲಿ ಬಿಡುಗಡೆಯಾಗಿದೆ. ಇದು ಈ ಚಿತ್ರದಿಂದ ಬಿಡುಗಡೆಯಾಗುತ್ತಿರುವ ಚಿತ್ರದ ಎರಡನೇ ಹಾಡಾಗಿದೆ. ಈ ಹಾಡಿನಲ್ಲಿ ನೋಡಿರುವ…