
Anurag Kashyap; ಅನುರಾಗ್ ಕಶ್ಯಪ್ಗೆ ‘8’ರ ನಂಟು; ಕನ್ನಡ ಚಿತ್ರದಲ್ಲಿ ನಂಟು
ಬಾಲಿವುಡ್ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರಾದ ಅನುರಾಗ್ ಕಶ್ಯಪ್, ಇತ್ತೀಚಿನ ದಿನಗಳಲ್ಲಿ ನಿರ್ದೇಶನಕ್ಕಿಂತ ನಟನೆಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಅವರು ಹಲವು ಚಿತ್ರಗಳಲ್ಲಿ ನಟಿಸಿದ್ದು, ಇದೀಗ ಅವರು ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. AVR ಪ್ರೊಡಕ್ಷನ್ ಸಂಸ್ಥೆ ನಿರ್ಮಾಣದ ‘8’ ಎಂಬ ಹೊಸ ಚಿತ್ರದಲ್ಲಿ ಅನುರಾಗ್ ಕಶ್ಯಪ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಸುಜಯ್ ಶಾಸ್ತ್ರಿ ನಿರ್ದೇಶನ ಮಾಡುತ್ತಿದ್ದು, ‘ಬಿಗ್ ಬಾಸ್’ ಖ್ಯಾತಿಯ ಕಾರ್ತಿಕ್ ಮಹೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಇದೀಗ…