
ಮದುವೆ ಸಂಭ್ರಮದಲ್ಲಿ ತನ್ನೂರಿನ ಶಾಲೆಗೆ ಹೈಟೆಕ್ ಸ್ಪರ್ಶ ಕೊಡಿಸಿದ ಧನಂಜಯ್
ನಟ-ನಿರ್ಮಾಪಕ ಧನಂಜಯ್ ಮದುವೆ ತಯಾರಿಯಲ್ಲಿದ್ದಾರೆ. ಫೆಬ್ರವರಿ 16ರಂದು ಅವರು ಮೈಸೂರಿನಲ್ಲಿ ಧನ್ಯತಾ ಜೊತೆಗೆ ವಿವಾಹವಾಗಲಿದ್ದು, ಅದಕ್ಕೂ ಮೊದಲು ಸಮಯ ಸಿಕ್ಕಾಗಲೆಲ್ಲಾ ಗಣ್ಯರಿಗೆ ಮದುವೆ ಆಮಂತ್ರಣ ನೀಡುತ್ತಿದ್ದಾರೆ. ಈಗಾಗಲೇ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರಿಗೆ ಮದುವೆಗೆ ಆಮಂತ್ರಣ ನೀಡಿದ್ದಾರೆ. ಈ ಮಧ್ಯೆ, ಅವರು ತಾವು ಹುಟ್ಟಿದ ಊರಿನ ಶಾಲೆಯಲ್ಲಿ ಓದದೇ ಇದ್ದರೂ ತವರೂರಿನ ಶಾಲೆಗೆ ಹೊಸ ರೂಪ ನೀಡುತ್ತಿದ್ದಾರೆ. ತಮ್ಮ ಮದುವೆಯ ಸಂದರ್ಭವನ್ನು ಸಾರ್ಧಕಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ…